ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಬಿರುಗಾಳಿ ಸಹಿತದ ಮಳೆಯಿಂದಾಗಿ 207 ಹೆಕ್ಟೇರ್ ತೋಟಗಾರಿಕೆ ಬೆಳೆ ಮತ್ತು 95 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾನಿಗೊಳಗಾಗಿದ್ದು, ರೈತರುಯಾವುದೇ ಕಾರಣಕ್ಕೂ ಎದೆಗುಂದಬಾರದು, ಬೆಳೆಹಾನಿಗೊಳಗಾದ ರೈತರಿಗೆ ನಿಯಮಗಳ ಅನ್ವಯಸರ್ಕಾರ ಪರಿಹಾರ ನೀಡಲಿದೆ ಎಂದು ಪೌರಾಡಳಿತ,ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಅರಸನಹಳ್ಳಿ, ಅಜ್ಜವಾರ ಹಂಡಿಗಾನಾಳ, ವರದಹಳ್ಳಿ ಸೇರಿದಂತೆ ವಿವಿಧ ಮಳೆಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ರೈತರಿಗೆ ಸಾಂತ್ವನ ಹೇಳಿ ಬಳಿಕ ಮಾತನಾಡಿದರು.
ಕೃಷಿ, ತೋಟಗಾರಿಕೆ ಸೇರಿದಂತೆ ಯಾವುದೇ ಬೆಳೆ ಬೆಳೆಯುವ ರೈತರು ಹವಾಮಾನವೈಪರೀತ್ಯಗಳಿಂದ ಆಗುವ ಬೆಳೆಹಾನಿ ನಷ್ಟದಿಂದಪಾರಾಗಲು ಮುನ್ನೆಚ್ಚರಿಕೆಯಿಂದ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಬೇಕು. ಸರ್ಕಾರ ನೀಡುವ ಪರಿಹಾರದ ಜೊತೆಗೆ ಕೇಂದ್ರದ ನರೇಗಾ ಯೋಜನೆಯಡಿಯೂ ಬೆಳೆ ನಷ್ಟ ಪರಿಹಾರಕ್ಕೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ನರೇಗಾದಡಿಯೂ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬ್ಯಾಂಕ್‌ಗಳಲ್ಲಿ ಶೇ 0.7 ರಷ್ಟು ಬಡ್ಡಿದರದಲ್ಲಿ ಬೆಳೆ ಸಾಲವನ್ನು ನೀಡಲಾಗುತ್ತಿದೆ. ರೈತರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಸರ್ಕಾರ ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗೆ ಇರುತ್ತದೆ ಎಂದರು. ಇದೇ ಸಂದರ್ಭದಲ್ಲಿ ಸಚಿವರು ದ್ರಾಕ್ಷಿ ತೋಟ ಸಂಪೂರ್ಣ ನೆಲಕಚ್ಚಿದ ಹಿನ್ನೆಲೆಯಲ್ಲಿ ಅರಸನಹಳ್ಳಿ ರೈತ ನಂಜೇಗೌಡ ಅವರಿಗೆ ಐವತ್ತು ಸಾವಿರ ವೈಯಕ್ತಿಕ ಪರಿಹಾರ ವಿತರಿಸಿದರು.
ಜಿಲ್ಲಾಧಿಕಾರಿ ಆರ್.ಲತಾ, ಜಂಟಿ ಕೃಷಿನಿರ್ದೇಶಕಿ ರೂಪಾ, ವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್, ತೋಟಗಾರಿಕೆಇಲಾಖೆಯ ಉಪನಿರ್ದೇಶಕ ರಮೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.