Advertisement

55 ಯೋಜನೆಗಳ 3451.24 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ

09:09 PM Mar 28, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 55 ಯೋಜನೆಗಳ 3451.24 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

Advertisement

ಸೋಮವಾರ ಸಂಜೆ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 139 ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟು 55 ಯೋಜನೆಗಳಿಂದ 3451.24 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 33049 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2012.14 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 22033 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.

15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 43 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 118 7.93 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 11016 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 4 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 251.17 ಕೋಟಿ ರೂ. ಹೂಡಿಕೆಯಾಗಲಿದೆ.

Advertisement

ಇದನ್ನೂ ಓದಿ: ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ

 

Advertisement

Udayavani is now on Telegram. Click here to join our channel and stay updated with the latest news.

Next