ಮೈಸೂರು:”ಹಿಂದಿ ರಾಷ್ಟ್ರ ಭಾಷೆ” ಎನ್ನುವ ಕುರಿತು ನಟರಾದ ಸುದೀಪ್ ಮತ್ತು ಅಜಯ್ ದೇವ ಗನ್ ನಡುವೆ ಟ್ವೀಟ್ ಸಮರ ನಡೆದು ಭಾರಿ ಚರ್ಚೆ ನಡೆಯುತ್ತಿರುವ ವೇಳೆ ಸಚಿವ ಮುರುಗೇಶ್ ನಿರಾಣಿ ಅವರು ”ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿಕೆ ನೀಡಿದ್ದಾರೆ.
”ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ.ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ. ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗುತ್ತೇವೆ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರುವುದರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷೆಗಳನ್ನೂ ಪ್ರೀತಿಸುತ್ತೇನೆ”ಎಂದರು.
ಇದನ್ನೂ ಓದಿ : ರಾಷ್ಟ್ರ ಭಾಷೆ ವಿಚಾರದಲ್ಲಿ ಸುದೀಪ್ ಹೇಳಿರುವುದು ಸರಿಯಾಗಿದೆ: ಸಿಎಂ ಬೊಮ್ಮಾಯಿ
ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದನ್ನು ಸಿಎಂ ತೀರ್ಮಾನ ಮಾಡುತ್ತಾರೆ. ಈಗಾಗಲೇ ನಮಗೆ ಜವಾಬ್ದಾರಿ ನೀಡಿದ್ದಾರೆ. ಅದರಲ್ಲಿ ಉತ್ತಮ ಪರ್ಫಾಮೆನ್ಸ್ ನೀಡುವುದು ನಮ್ಮ ಕೆಲಸ. ಸಂಪುಟ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಹೊಸಬರಿಗೆ ಸ್ಥಾನ ಕೊಡುವುದರ ಬಗ್ಗೆ ಎಲ್ಲೂ ಚರ್ಚೆ ಆಗುತ್ತಿಲ್ಲ. ಆಕಾಂಕ್ಷಿಗಳು ಹೆಚ್ಚಾಗಿರೋದರಲ್ಲಿ ತಪ್ಪೇನಿಲ್ಲ. ನಮ್ಮಲ್ಲಿ 121 ಜನ ಶಾಸಕರಿದ್ದಾರೆ, ಅದರಲ್ಲಿ ಹೆಚ್ಚಿನ ಜನಕ್ಕೆ ಮಂತ್ರಿಯಾಗುವ ಸಾಮರ್ಥ್ಯ ಇದೆ” ಎಂದರು.
”ಜಿಲ್ಲಾವಾರು ಜಾಗೂ ಜಾತಿವಾರು ಅಳೆದು ತೂಗಿ ಸ್ಥಾನ ನೀಡುತ್ತಾರೆ. ಅದನ್ನ ನಡೆಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿ” ಎಂದರು.