ಬೆಂಗಳೂರು: ಶಿಕ್ಷಕರಿಗೆ ಹಳೆಯ ಪಿಂಚಣಿ ಜಾರಿ ಮಾಡುವುದು ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದ್ದಾರೆ.
ತಾಂತ್ರಿಕ ಸಮಸ್ಯೆಯಿಂದ ಪರಸ್ಪರ ವರ್ಗಾವಣೆಯಲ್ಲಿ ಅವಕಾಶ ಕೈ ತಪ್ಪುತ್ತಿರುವ ಶಿಕ್ಷಕರಿಗೆ ಪರಸ್ಪರ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕು.
2005-06ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಧಿಸೂಚನೆಯ ಅನ್ವಯ ನೇಮಕಾತಿಯಾದ ಶಿಕ್ಷಕರಿಗೆ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸುವಂತೆ ಮತ್ತು ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಬಹುಕಾಲದ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮನವಿ ಮಾಡಿದೆ.
ಇದನ್ನೂ ಓದಿ:ವಿಜಯಪುರ : ಕಾಂಗ್ರೆಸ್, ಬಿಜೆಪಿ ಅವಿರೋಧ ಆಯ್ಕೆ ಕನಸು ಭಗ್ನ
ಈ ಮನವಿಯನ್ನು ಪರಿಶೀಲಿಸಿ, ಕಾನೂನು ಪ್ರಕಾರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಹಳೆಯ ಪಿಂಚಣಿ ಜಾರಿ, ವರ್ಗಾವಣೆ ತಾಂತ್ರಿಕ ದೋಷಗಳು ಹಾಗೂ ಮುಖ್ಯ ಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡುವ ಕುರಿತು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.