Advertisement

ಮಳೆ ಹಾನಿ ಮೇಲೆ ನಿಗಾವಹಿಸುವಂತೆ ಸಚಿವ ನಿರಾಣಿಯಿಂದ ಅಧಿಕಾರಿಗಳಿಗೆ ಸೂಚನೆ

11:23 AM Jul 13, 2022 | Team Udayavani |

ಕಲಬುರಗಿ: ಸತತ ಮಳೆಯಿಂದ ಆಗುತ್ತಿರುವ ಹಾನಿಯ ಮೇಲೆ ನಿಗಾ ವಹಿಸುವಂತೆ ಬೃಹತ್ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಬುಧವಾರ ಡಿ.ಸಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಮಳೆಯಿಂದ ತಗ್ಗು ಪ್ರದೇಶದ ಹೊಲಗಳಲ್ಲಿ ಬೆಳೆ ಹಾನಿಯಾಗಿರುವ ಸಾಧ್ಯತೆಗಳಿವೆ. ಅದಲ್ಲದೇ ಭೀಮಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಬಗ್ಗೆಯೂ ನಿಗಾ ವಹಿಸಿ ನದಿ ಪಾತ್ರದ ಜನರಿಗೆ ಮಾಹಿತಿ ಕೊಡುವಂತೆ ಸಚಿವರು ನಿರ್ದೇಶನ ನೀಡಿದರು.

ಇದನ್ನೂ ಓದಿ: ಬೈಂದೂರು: ಸುಟ್ಟು ಹೋದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿ ಪತ್ತೆ

ಸಭೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ‌ ಮತ್ತಿಮೂಡ, ವಿಧಾನ ಪರಿಷತ್ ಶಾಸಕ ಸುನೀಲ ವಲ್ಯಾಪೂರೆ, ಡಿ.ಸಿ.ಯಶವಂತ ವಿ. ಗುರುಕರ್, ನಗರ‌ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಎಸ್.ಪಿ.ಇಶಾ‌ ಪಂತ್, ಮಹಾನಗರ ಪಾಲಿಕೆ ಅಯುಕ್ತ‌ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ‌ ತೆಗ್ಗೆಳ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next