Advertisement

Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್‌

10:20 PM Nov 13, 2024 | Team Udayavani |

ಮಂಗಳೂರು: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದರು.

Advertisement

ಮಂಗಳೂರಿನ ಟಿ.ವಿ.ರಮಣಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್‌ ಕೌನ್ಸಿಲ್‌ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು ಹಣಕಾಸು ಆಯೋಗದ ಶಿಫಾರಸಿನ ಪ್ರಕಾರವೇ ರಾಜ್ಯಗಳಿಗೆ ಅನುದಾನ ನೀಡಲಾಗಿದೆ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಕೇಂದ್ರದಲ್ಲಿ ಯುಪಿಎ ಅವಧಿಯ 10 ವರ್ಷಗಳು ಮತ್ತು ಎನ್‌ಡಿಎ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ಜಾಸ್ತಿಯೇ ಅನುದಾನ ಹಂಚಿಕೆ ಮಾಡಿದ್ದೇವೆ. ಈ ಕುರಿತಾದ ಎಲ್ಲ ಅಂಕಿ ಅಂಶಗಳು ಇರುವಾಗ ಸ್ವತಃ ಮುಖ್ಯಮಂತ್ರಿಯೇ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ ಎಂದರು.

ಬಿಹಾರ, ಆಂಧ್ರಪ್ರದೇಶ ರಾಜ್ಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿ, ಕೇರಳ- ಮಣಿಪುರಕ್ಕೆ ಕಡಿಮೆ ಅನುದಾನ ಹಂಚಿಕೆ ಮಾಡಿರುವ ಕುರಿತು ನಾಗರಿಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಅಂತಹ ಯಾವ ತಾರತಮ್ಯವನ್ನೂ ಮಾಡಿಲ್ಲ. ಬಿಹಾರದಲ್ಲಿ ಪ್ರತಿವರ್ಷ ಕೋಸಿ ನದಿಯ ಪ್ರವಾಹ ಸಮಸ್ಯೆಯಿಂದ ಜನ- ಜೀವನಕ್ಕೆ ತೀವ್ರ ಹಾನಿ ಉಂಟಾಗುತ್ತಿದೆ. ಈ ಕಾರಣಕ್ಕೆ ಸೂಕ್ತ ಚರ್ಚೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಹಾಗಂತ ಇತರ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡಿಲ್ಲ. ಈ ವಿಚಾರದಲ್ಲಿ ಕರ್ನಾಟಕದಂತೆ ಕೇರಳವೂ ರಾಜಕೀಯವಾಗಿ ಕೆಸರೆರಚುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Advertisement

Udayavani is now on Telegram. Click here to join our channel and stay updated with the latest news.

Next