Advertisement
ವಾಲ್ಮೀಕಿ ಹಗರಣದಲ್ಲಿ ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಾರದೇ ಹಣ ವರ್ಗಾವಣೆಯಾಗಿದೆಯಾ? ಹಗರಣಕ್ಕೆ ಸಂಬಂಧಿಸಿದಂತೆ ಅವರು ರಾಜೀನಾಮೆ ಕೊಡಬೇಕೆಂಬ ಶಾಸಕ ಜಿ.ಟಿ. ದೇವೇಗೌಡರ ಹೇಳಿಕೆಗೆ ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಮೈಸೂರು: ಮುಡಾದಿಂದ ಬದಲಿ ನಿವೇಶನ ನೀಡಿರುವುದು ಕಾನೂನು ಬದ್ಧವಾಗಿದೆ ಎನ್ನುವುದು ನಮ್ಮ ವಾದ. ಒಂದೊಮ್ಮೆ ಕಾನೂನು ಬಾಹಿರವಾಗಿ ಬದಲಿ ನಿವೇಶನ ನೀಡಲಾಗಿದೆ ಎನ್ನುವುದಾದರೆ ಬಿಜೆಪಿಯವರು ದಾಖಲೆ ತೋರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು.
Related Articles
Advertisement
ಬಿಜೆಪಿಗೆ ಹೊಟ್ಟೆಯುರಿಮುಡಾ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ವೃಥಾ ಆರೋಪ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾ ರೆ. ಇಂತಹ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸರಕಾರದ ಅವಧಿಯಲ್ಲಿ ಮುಡಾ ತಪ್ಪು ಮಾಡಿದ್ದರೆ ಯಾರು ಜವಾಬ್ದಾರರು? ಸಿದ್ದರಾಮಯ್ಯ ಜವಾಬ್ದಾರರೇ? ಒಂದು ವೇಳೆ ಇದನ್ನು ರದ್ದು ಮಾಡಿದರೆ, ಭೂ ಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕು. ಅದರ ಪ್ರಕಾರ 57 ಕೋಟಿಯಾದರೆ ಬಡ್ಡಿ ಸೇರಿಸಿ 62 ಕೋಟಿಯಾಗಲಿದ್ದು, ಮುಡಾದವರು 62 ಕೋಟಿ ಕೊಡಬೇಕಾಗುತ್ತದೆ. 2021ರಲ್ಲಿ ನಾನು ವಿಪಕ್ಷದ ನಾಯಕನಿದ್ದೆ , ಆಗ ನಾನು ಹೇಳಿದ್ದನ್ನು ಕೇಳಿ ಮಾಡುತ್ತಿದ್ದರೆ? ಎಂದು ಕಿಡಿಕಾರಿದರು.