Advertisement

ಸಚಿವ ನಿತಿನ್‌ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌

09:50 PM Sep 09, 2022 | Team Udayavani |

ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್‌-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ.

Advertisement

ಶುಕ್ರವಾರ ಸಂಸದ ಡಿ.ಕೆ.ಸುರೇಶ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ 424.100 ನಡುವೆ ಎಡಭಾಗದಲ್ಲಿ ದ್ವಿಪಥದ ಪರ್ಯಾಯ ಸೇತುವೆ ನಿರ್ಮಿಸಬೇಕು. ಇದಕ್ಕೆ 62.10 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಬೆಂಗಳೂರು- ದಿಂಡಗಲ್‌ ನಡುವೆ ಸಂಚರಿಸುವ ವಾಹನ ಸವಾರರಿಗೆ ಸಾಕಷ್ಟು ಅನುಕೂಲ ಆಗಲಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.

ಈಗಾಗಲೇ ಇರುವ ಸೇತುವೆಯು 1954ರಲ್ಲಿ ನಿರ್ಮಿಸಿದ್ದು, ಸಾಕಷ್ಟು ಶಿಥಿಲಗೊಂಡಿದೆ. ಈ ಮಧ್ಯೆ ಉದ್ದೇಶಿತ ಮಾರ್ಗದಲ್ಲಿ ಸಂಚಾರ ದಟ್ಟಣೆಯೂ ಹೆಚ್ಚಾಗಿದೆ. ಈ ಎರಡೂ ದೃಷ್ಟಿಯಿಂದ ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ಈಗಿರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕು. ಯೋಜನೆ ಕುರಿತ ಅಂದಾಜು ವೆಚ್ಚ ಸೇರಿದಂತೆ ಪ್ರಸ್ತಾವನೆಯನ್ನು ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next