ಚಿಕ್ಕೋಡಿ: ನಿಪ್ಪಾಣಿ ಕ್ಷೇತ್ರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಹಸಿರುಶಾಲು ಹೊದ್ದು ಎತ್ತಿನ ಬಂಡಿ ಏರಿದ ಕೂಡಲೇ ಎಲ್ಲೆಡೆ ಜೈ ಜವಾನ; ಜೈ ಕಿಸಾನ್ ಘೋಷಣೆಗಳು ಮೊಳಗಿದವು!
ಭೀವಶಿ ಗ್ರಾಮದ ಶ್ರೀ ಥಳೋಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಎತ್ತಿನ ಬಂಡಿ ಏರಿದ ಸಚಿವ ಬಿ.ಸಿ.ಪಾಟೀಲ ಅವರನ್ನು ಝಾಂಜ್, ಡೊಳ್ಳು ಮತ್ತಿತರ ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಯಿತು.
ಇದನ್ನೂ ಓದಿ: ಕೇವಲ 2 ಪಂದ್ಯ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಗೂ ಇದೇ ಪ್ಲೇ ಆಫ್ ಅವಕಾಶ: ಹೇಗೆ ಗೊತ್ತಾ?
ಅದೇ ಗ್ರಾಮದವರಾದ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ , ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಜತೆ ಎತ್ತಿನಬಂಡಿ ಏರಿ ಸಾಥ್ ನೀಡಿದರು.
ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದರು. ಗ್ರಾಮದಲ್ಲಿ ಮನೆಗಳ ಮುಂದೆ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ತೋರಣ ಕಟ್ಟಿದ್ದರಿಂದ ಇಡೀ ಊರಿನಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.