Advertisement

ಖಂಡ್ರೆ ಪರ ಸಚಿವ ಚವ್ಹಾಣ ಪ್ರಚಾರ

10:19 AM Dec 05, 2021 | Team Udayavani |

ಬೀದರ: ವಿಧಾನ ಪರಿಷತ್‌ ಚುನಾವಣೆಯ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಶನಿವಾರ ಔರಾದ ತಾಲೂಕಿನ 11ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಚಾರ ಕೈಗೊಂಡು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಮತಯಾಚನೆ ನಡೆಸಿದರು.

Advertisement

ಔರಾದ ತಾಲೂಕಿನ ಬಾದಲಗಾಂವ, ಸುಂದಾಳ, ನಾಗಮಾರಪಳ್ಳಿ, ಚಿಂತಾಕಿ, ಗುಡಪಳ್ಳಿ, ವಡಗಾಂವ, ಚಿಕ್ಲಿ(ಜೆ), ಜಂಬಗಿ, ಜೋಜನಾ, ಸಂತಪೂರ ಹಾಗೂ ಎಕಲಾರ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಿ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಬೇಕು ಎಂದು ಕೋರಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕೇಂದ್ರದಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರವಿರುವುದರಿಂದ ಅಭಿವೃದ್ಧಿಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನಗಳು ಬಿಜೆಪಿಯ ಪಾಲಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೀದರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಎಲ್ಲ ಕಡೆಗಳಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ. ಸರಳ ಮತ್ತು ಸಜ್ಜನಿಕೆಯ ಮತ್ತು ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರ ಗೆಲುವು ಶೇ.100ರಷ್ಟು ಖಚಿತ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ್ಪ ಕಂಟೆ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ಕೇರಬಾ ಪವಾರ, ಸಂತೋಷ ಪೋಕಲವಾರ, ಅಶೋಕ ಅಲಮಾಜೆ, ಪ್ರಕಾಶ ಅಲಮಾಜೆ, ಯದು ಮೇತ್ರೆ, ಸಂತೋಷ ಖಾನಾಪೂರೆ, ಬಿ.ಕೆ ನಾಯಕ, ಬಾಬು ರಾಠೊಡ, ಶಿವಾಜಿ ರಾಠೊಡ, ರೋಪಸಿಂಗ್‌ ರಾಠೊಡ ಹಾಗೂ ಇತರರು ಸಚಿವರಿಗೆ ಸಾಥ್‌ ನೀಡಿದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next