Advertisement
ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೆ ನೀಡಿದ್ದು, ತಕ್ಷಣವೇ ಅವರನ್ನು ಸಂಪುಟದಿಂದ ಕೈ ಬಿಟ್ಟು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ ನಡೆದ ಬ್ರಾಹ್ಮಣ ಯುವ ಪರಿಷತ್ ಸಭೆಯಲ್ಲಿ ಜಾತ್ಯತೀತ ವ್ಯಕ್ತಿಗಳಿಗೆ ತಂದೆ ತಾಯಿ ಯಾರೆಂದು ಗೊತ್ತಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಖಂಡನೀಯ. ಪ್ರಧಾನಿ ಮತ್ತು ಕೇಂದ್ರ ಸರ್ಕಾರ ಅನಂತಕುಮಾರ್ ಹೆಗಡೆಯನ್ನು ರಕ್ಷಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಮೀಸಲಾತಿ ಹಾಗೂ ದಲಿತ ವಿರೋಧಿ ಹೇಳಿಕೆ ನೀಡಿದವರ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ವೇಣುಗೋಪಾಲ ಆಗ್ರಹಿಸಿದ್ದಾರೆ.
ಸಾಗರ: ಸಂವಿಧಾನ, ಹಾಗೂ ಜಾತ್ಯತೀತ ಪದವನ್ನು ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮ ದೇಶದ ಸಂವಿಧಾನದಲ್ಲಿ ಉಲ್ಲೇಖೀಸಿದ ಜಾತ್ಯತೀತ ಎನ್ನುವ ಪದ ಬಳಕೆ ಮಾಡುವ ಭರದಲ್ಲಿ ಸಚಿವರು ಲೇವಡಿ ಮಾಡಿದ್ದಾರೆ. ಹೀಗಾಗಿ ಸಚಿವರ ವಿರುದ್ಧ
ಒಳಸಂಚು ಹಾಗೂ ದೇಶದ್ರೋಹಿ ಕೃತ್ಯದಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಶಿವಾನಂದ ವಿನಂತಿಸಿದ್ದಾರೆ. ಆದರೆ ಈವರೆಗೂ ಸಚಿವರ ವಿರುದ್ಧ ಪ್ರಕರಣ ದಾಖಲಾಗಿಲ್ಲ.