Advertisement

ಈವರೆಗೆ 25 ಸಾವಿರ ಹಸುಗಳ ರಕ್ಷಣೆ: ಸಚಿವ ಪ್ರಭು ಚವ್ಹಾಣ್‌

10:29 PM Sep 14, 2022 | Team Udayavani |

ವಿಧಾನಪರಿಷತ್ತು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಾಗಿನಿಂದ 25 ಸಾವಿರ ಹಸುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪಶು ಸಂಗೋಪಾನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ಎಸ್‌. ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಯ್ದೆ ಜಾರಿಗೆ ತಂದಾಗಿನಿಂದ 25 ಸಾವಿರ ಹಸುಗಳನ್ನು ರಕ್ಷಿಸಲಾಗಿದ್ದು, ಅಕ್ರಮ ಗೋಸಾಗಾಟ, ಮಾರಾಟ ಮತ್ತು ಪ್ರಾಣಿ ವಧೆ ಸಂಬಂಧ ಸಾವಿರಕ್ಕೂ ಹೆಚ್ಚು ಪ್ರಕಣಗಳನ್ನು ದಾಖಲಿಸಲಾಗಿದೆ ಎಂದರು.

ರಾಜ್ಯದಲ್ಲಿ 2019ರಲ್ಲಿ ನಡೆದ 20ನೇ ಜಾನುವಾರು ಗಣತಿ ಪ್ರಕಾರ ಅಂದಾಜು 77,075 ಬಿಡಾಡಿ ದನಗಳಿದ್ದು, ಅವುಗಳಿಗೆ ಆಶ್ರಯದ ಅಗತ್ಯವಿದ್ದರೆ ಸರ್ಕಾರಿ ಹಾಗೂ ಖಾಸಗಿ ಗೋಶಾಲೆಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ಸ್ಥಾಪಿಸಲು ಜಮೀನು ಗುರುತಿಸಲಾಗಿದೆ. ಈ ಪೈಕಿ ಚಿಕ್ಕಮಗಳೂರು, ವಿಜಯಪುರ, ಹಾಸನ, ಮೈಸೂರು, ತುಮಕೂರು ಮತ್ತು ಕೋಲಾರದಲ್ಲಿ ಗೋಶಾಲೆಗಳನ್ನು ಪ್ರಾರಂಭಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಗೋಶಾಲೆಗಳಿಗೆ ಮೇವು, ನೀರು, ವಿದ್ಯುತ್ಛಕ್ತಿ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳು ಲಭ್ಯ ಇದ್ದಾವೆ. ಗೋಶಾಲೆ ನಿರ್ಮಾಣ-ನಿರ್ವಹಣೆಗೆ 2021-22 ಮತ್ತು 2022-23ನೇ ಸಾಲಿನಲ್ಲಿ ಪ್ರತಿ ಜಿಲ್ಲೆಗೆ 1 ಕೋಟಿಯಂತೆ 30 ಜಿಲ್ಲೆಗಳಿಗೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next