Advertisement
ಪಶುಪಾಲನಾ ಭವನದಲ್ಲಿ ನಡೆದ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೋವಿಡ್ ನೆಪ ಒಡ್ಡಿ ಗೋಶಾಲೆಗಳತ್ತ ಅಧಿಕಾರಿಗಳು ತಲೆ ಹಾಕುತ್ತಿಲ್ಲ, ಜಾನುವಾರುಗಳ ಆರೋಗ್ಯ ತಪಾಸಣೆ, ಜಾನುವಾರುಗಳಿಗೆ ಕಿವಿಓಲೆ (ಟ್ಯಾಗ್) ಹಾಕುವುದು ಸರಿಯಾಗಿ ಆಗುತ್ತಿಲ್ಲ ಎಂದು ರಾಜ್ಯದ ವಿವಿಧ ಭಾಗಗಳಿಂದ ದೂರುಗಳು ಬರುತ್ತಿದ್ದು ಜಾನುವಾರು ಸಾಕಣೆದಾರರು ಮತ್ತು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Related Articles
Advertisement
ರಾಜ್ಯದಲ್ಲಿ ಜಾನುವಾರುಗಳಿಗೆ ನೀಡಲಾಗುವ ಉಚಿತ ಔಷಧಗಳ ದಾಸ್ತಾನು ಸಾಕಷ್ಟಿದ್ದು ಗುಣಮಟ್ಟದ ಔಷಧವನ್ನು ಜಾನುವಾರುಗಳಿಗೆ ನೀಡಲು ಪಶುವೈದ್ಯಾಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ. ೨೦೨೧-೨೨ನೇ ಸಾಲಿನ ಮೊದಲ ಕಂತು ಆರ್ಥಿಕ ಇಲಾಖೆಯಿಂದ ಬಿಡುಗಡೆ ಆಗಿದ್ದು ಪಶುಸಂಗೋಪನೆ ಇಲಾಖೆಯ ಎಲ್ಲ ಅಭಿವೃದ್ಧಿ ಕೆಲಸಗಳು ಮತ್ತಷ್ಟು ವೇಗೆದಿಂದ ಸಾಗಬೇಕು ಎಂದು ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಪಶುಪಾಲನಾ ಭವನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಾರ್ ರೂಮ್ ಗೆ ಸಚಿವರು ಭೇಟಿ ನೀಡಿದರು. ವಾರ್ ರೂಮ್ ಗೆ ಬೇಕಾದ ಎಲ್ಲ ತಂತ್ರಜ್ಞಾನ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.