Advertisement
ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮಹಾಂತೇಶ ಬಸವಂತರಾಯ ದೊಡ್ಡಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಲ್ಲಿ ಹೊಸದಾಗಿ 100 ಪಶು ಚಿಕಿತ್ಸಾ ಕೇಂದ್ರಗಳನ್ನು ಹಂತಹಂತವಾಗಿ ಘೋಷಿಸಲಾಗಿದೆ. ಅದರಂತೆ ಅವಶ್ಯಕತೆಗೆ ಅನುಗುಣವಾಗಿ ಮೊದಲ ಹಂತದಲ್ಲಿ 20 ಪಶು ಚಿಕಿತ್ಸಾಲಯ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. 30 ಪಶು ಚಿಕಿತ್ಸಾಲಯ ಪ್ರಾರಂಭಿಸಲು ಪ್ರಸ್ತಾವನೆ ಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ಅಗತ್ಯವಿರುವ ಕಡೆ ಕೇಂದ್ರ ಆರಂಭಿಸುತ್ತೇವೆ ಎಂದು ವಿವರಿಸಿದರು.ಈ ವೇಳೆ ಮಧ್ಯ ಪ್ರವೇಶಿಸಿದ ಹನೂರು ಶಾಸಕ ನರೇಂದ್ರ, ನೀವು ಹೊಸ ಪಶು ಚಿಕಿತ್ಸಾ ಕೇಂದ್ರ ತೆರೆಯುತ್ತಾ ಹೋದರೆ ಸಾಲದು. ಪಶು ಚಿಕಿತ್ಸಕರನ್ನು ನೇಮಿಸಬೇಕು. ಇತ್ತೀಚೆಗೆ ಚರ್ಮಗಂಟು ರೋಗ ಬಂದಾಗ ನಮ್ಮ ಕ್ಷೇತ್ರದಲ್ಲಿ ಒಂಬತ್ತು ಪಶು ಚಿಕಿತ್ಸಾ ಕೇಂದ್ರದಲ್ಲಿ ಒಬ್ಬರೇ ವೈದ್ಯರಿದ್ದರು ಎಂದು ಟೀಕಿಸಿದರು.