Advertisement

NEP ರದ್ದತಿಗೆ ಸಚಿವ ಪ್ರಧಾನ್‌ ಆಕ್ಷೇಪ

09:16 PM Aug 17, 2023 | Team Udayavani |

ಹೊಸದಿಲ್ಲಿ, ಆ. 17: ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದು ಮಾಡುವ ನಿರ್ಧಾರದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

Advertisement

ರಾಜ್ಯದಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸಚಿವ ಪ್ರಧಾನ್‌, ದೇಶದ ಶಿಕ್ಷಣ ವ್ಯವಸ್ಥೆ ಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಅದನ್ನು ಜಾರಿ ಮಾಡಲಾಗಿತ್ತು. ಹಲವು ವರ್ಷಗಳ ಕಾಲ ಸಮಾಲೋಚನೆ ಬಳಿಕ ಹೊಸ ನೀತಿ ಅನಾವರಣ ಮಾಡಲಾಗಿತ್ತು. ಕರ್ನಾಟಕ ಸರಕಾರ ಈ ನೀತಿ ರದ್ದು ಮಾಡಲಾಗುತ್ತದೆ ಎಂದು ಹೇಳಿರುವುದು ಖಂಡನೀಯ ಎಂದಿದ್ದಾರೆ.

ಶಿಕ್ಷಣ ಎನ್ನುವುದು ಪ್ರಗತಿಯ ಸಂಕೇತವಾಗಿ ಇರಬೇಕೇ ವಿನಾ ರಾಜಕೀಯದ ದಾಳ ಆಗಬಾರದು. ಕರ್ನಾಟಕದ ನಿಲುವು ಸುಧಾರಣೆ ವಿರೋಧಿ, ಭಾರತೀಯ ಭಾಷೆಗಳ ಮತ್ತು ಕರ್ನಾಟಕದ ಹಿತಾಸಕ್ತಿಯ ವಿರೋಧಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next