Advertisement

ರಾಹುಲ್‌ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯ

08:13 PM Feb 08, 2023 | Team Udayavani |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಉಲ್ಲೇಖಿಸಿರುವ ಕೆಲವು ಅಂಶಗಳನ್ನು ಕಡತದಿಂದ ತೆಗೆದು ಹಾಕಲಾಗಿದೆ. ಈ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

Advertisement

ಜತೆಗೆ ಸದನದಲ್ಲಿ ತಪ್ಪು ಮಾಹಿತಿ ನೀಡಿದ ವಯನಾಡ್‌ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸದನದಲ್ಲಿ ಪ್ರಮುಖ ವಿಚಾರ ಮಾತನಾಡುವ ಮೊದಲು ನೋಟಿಸ್‌ ನೀಡಬೇಕು. ಆದರೆ, ಅವರು ಅದನ್ನು ಪಾಲಿಸಲಿಲ್ಲ ಎಂದು ದೂರಿದರು.

ಪ್ರಜಾಸತ್ತೆಯ ಸಮಾಧಿ:
ಭಾಷಣದ ಕೆಲ ಅಂಶಗಳನ್ನು ಕಡತದಿಂದ ತೆಗೆದು ಹಾಕುವ ಬಗ್ಗೆ ಸಂಸದ ರಾಹುಲ್‌ ಆಕ್ರೋಶ ವ್ಯಕ್ತಪಡಿಸಿ “ಪ್ರಜಾಸತ್ತೆಯ ಸಮಾಧಿಯಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ವಾದ್ರಾ ಜತೆಗೆ ಅದಾನಿ
ಪ್ರಧಾನಿ ಮೋದಿ ಜತೆಗೆ ಉದ್ಯಮಿ ಗೌತಮ್‌ ಅದಾನಿ ಇರುವ ಫೋಟೋ ರಿಲೀಸ್‌ ಮಾಡಿದ್ದಕ್ಕೆ ಪ್ರತಿಯಾಗಿ, ಬಿಜೆಪಿ ಸಂಸದ ರವಿಶಂಕರ ಪ್ರಸಾದ್‌, ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಇರುವ ಫೋಟೋವನ್ನು ಲೋಕಸಭೆಯಲ್ಲಿ ಪ್ರದರ್ಶಿಸಿದ್ದಾರೆ. ರಾಜ್ಯಸಭೆ ಸದಸ್ಯರಾಗಿರುವ ಮಹೇಶ್‌ ಜೇಠ್ಮಲಾನಿ ಅವರು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್, ಎನ್‌ಸಿಪಿ ಸಂಸ್ಥಾಪಕ ಶರದ್‌ ಪವಾರ್‌ ಜತೆಗೆ ಕುಳಿತಿರುವ ಫೋಟೋಗಳನ್ನು ಟ್ವೀಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next