Advertisement
ಧಾರವಾಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಸಂವಿಧಾನದ 320ನೇ ವಿಧಿ ತೀವ್ರ ಅಡ್ಡಿಯಾಗಿತ್ತು. ನರೇಂದ್ರ ಮೋದಿ ಸರ್ಕಾರ ಈ ವಿಧಿಯನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಿದೆ ಎಂದರು.
Related Articles
Advertisement
ಗುಪ್ಕಾರ್ ಒಕ್ಕೂಟದ ಈ ಕೆಲಸಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಹೇಳುತ್ತಿರುವುದು ಆ ಪಕ್ಷದ ದ್ವಂದ್ವ ನೀತಿ ತೋರಿಸುತ್ತದೆ. ಹಾಗಾದರೆ ಕಾಂಗ್ರೆಸ್ ಚೀನಾ ಪರವೇ? ದೇಶದ್ರೋಹಿಗಳ ಪರವೇ? ಪ್ರತ್ಯೇಕವಾದಿಗಳ ಪರವೇ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅವರು ಸವಾಲು ಹಾಕಿದರು. ರಾಹುಲ್ ಗಾಂಧಿ ಅವರು ಈ ವಿಚಾರದ ಬಗ್ಗೆ ದೇಶದ ಜನತೆ ಮುಂದೆ ತಮ್ಮ ನಿಲುವು ಏನು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.
ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಂಡ ನಂತರ ಅಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ. ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿವೆ. ಕೇಂದ್ರ ಸರ್ಕಾರದ ಸವಲತ್ತುಗಳು ಮನೆ ಮನೆಗೆ ತಲುಪುತ್ತಿವೆ ಎಂದು ಪ್ರಹ್ಲಾದ ಜೋಶಿ ಹೇಳಿದರು.