Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
Related Articles
Advertisement
“ಸಿಪಿಐ, ಪಿಎಸ್ಐ ಹಾಗೂ ಪಿಸಿಗಳೇ ರೌಡಿಗಳನ್ನು ಸಾಕುತ್ತಿದ್ದೀರಿ. ನಿಮ್ಮಿಂದಲೇ ಜಿಲ್ಲೆಯ ಮರ್ಯಾದೆ ಹಾಳಾಗುತ್ತಿದೆ. ರೌಡಿಗಳ ಹುಟ್ಟುಹಬ್ಬಕ್ಕೆ ಪೊಲೀಸ್ ಅಧಿಕಾರಿಗಳು ಹೋಗುತ್ತಾರೆ. ಆಚರಣೆಗೆ ಐಬಿಗಳಲ್ಲಿ ಅನುಮತಿ ನೀಡಲಾಗುತ್ತಿದೆ. ಈ ಹಿಂದಿನ ಪೊಲೀಸ್ ಅಧಿಕಾರಿಯೊಬ್ಬರು ರೌಡಿಯೊಬ್ಬನ ಹುಟ್ಟುಹಬ್ಬಕ್ಕೆ ಹೋಗಿ ವಿಷ್ ಮಾಡಿ ಫೋಟೋ ತೆಗೆಸಿಕೊಂಡಿದ್ದಾರೆ. ಪೊಲೀಸರು ರೌಡಿಗಳಿಗೆ ಅಣ್ಣಾ ಎಂದು ಸಂಬೋಧಿಸುತ್ತಾರೆ. ನಿಮಗೆ ನಾಚಿಕೆಯಾಗುವುದಿಲ್ಲವೇ? ನಿಮ್ಮ ಯೂನಿಫಾರ್ಮ್ ಗಾದರೂ ಮರ್ಯಾದೆ ಬೇಡವೇ? ಎಂದರು.
ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ದ ನಡೆಯುತ್ತಿರುವ ಇಲಾಖೆ ತನಿಖೆಗಳನ್ನು ಪೂರ್ಣಗೊಳಿಸುವಂತೆ ಕಮೀಷನರ್ ಹಾಗೂ ಎಸ್ ಪಿ ಗೆ ಸೂಚಿಸಿದ ಖರ್ಗೆ, ನಗರ ವ್ಯಾಪ್ತಿಯ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹೆಚ್ಚಾಗಿ ನಡೆಯುತ್ತಿದೆ. ಈ ಕೂಡಲೇ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಯೂನಿವರ್ಸಿಟಿ ಹಾಗೂ ಅಶೋಕ್ ನಗರ ಪೊಲೀಸ್ ಠಾಣೆಗಳು ವಿವಾದಿತ ಸಿವಿಲ್ ಕೇಸ್ ಗಳ ಸೆಟಲ್ ಮೆಂಟ್ ಅಡ್ಡಾಗಳಾಗಿವೆ, ಅಧಿಕಾರಿಗಳು ಬೀಟ್ ಗೆ ಹೋಗುವುದಿಲ್ಲ ಎಂದು ದೂರುಗಳು ಬಂದಿವೆ ಎಂದ ಸಚಿವರು ಈ ವಿಷಯವನ್ನು ಕಮೀಷನರ್ ಗಮನಕ್ಕೆ ತಂದು ಸರಿಪಡಿಸುವಂತೆ ಸೂಚಿಸಿದರು.
ಇದನ್ನೂ ಓದಿ:Goa; ಛತ್ರಪತಿ ಶಿವಾಜಿ ಮಹಾರಾಜರ ಕುದುರೆ ಸವಾರಿ ಪ್ರತಿಮೆ ತೆರವಿಗೆ ಆದೇಶ
ಪ್ರತಿ ಪೊಲೀಸ್ ಸ್ಟೇಷನ್ ಗಳಿಂದ ನಮ್ಮಿಬ್ಬರು ಸಚಿವರಿಗೆ 20,000 ಕೊಡಬೇಕು ಎಂದು ವದಂತಿಗಳಿವೆ. ಯಾರಾದರೂ ನಮ್ಮ ಹೆಸರು ಹೇಳಿ ವಸೂಲಿಗೆ ಇಳಿದರೆ ಅಂತವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ ಮಾತನಾಡಿ ಓವರ್ ಲೋಡ್ ಮರುಳು ಸಾಗಾಣಿಕೆ ಮಾಡುವ ವಾಹನಗಳನ್ನು ಸೀಜ್ ಮಾಡಿ ಕೇಸು ದಾಖಲಿಸಿ ಎಂದು ಸೂಚಿಸಿದರು.
ನಗರದಲ್ಲಿ 22 ಕ್ಲಬ್ ಗಳು ನಡೆಯುತ್ತಿವೆ. ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿವೆ ಪಟ್ಟಿ ಮಾಡಿ ಅಕ್ರಮ ಚಟುವಟಿಕೆ ಗಳು ನಡೆಯುತ್ತಿರುವ ಬಗ್ಗೆ ನಾನೇ ಮಾಹಿತಿ ಕೊಡುತ್ತೇನೆ ಅಂತಹ ಕ್ಲಬ್ ಗಳ ಮೇಲೆ ದಾಳಿ ಮಾಡಿ ಆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ. ಅಕ್ರಮ ಚಟುವಟಿಕೆ ನಡೆಸುವ ಯಾವ ಕ್ಲಬ್ ಕೂಡಾ ನಗರ ವ್ಯಾಪ್ತಿಯಲ್ಲಿ ಇರಬಾರದು ಎಂದು ಡಿಸಿಪಿ ಶ್ರೀನಿವಾಸಲು ಅವರಿಗೆ ಡಾ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಓ ಭನ್ವರ್ ಸಿಂಗ್ ಮೀನಾ, ನಗರ ಪೊಲೀಸ್ ಕಮೀಷನರ್ ಆರ್. ಚೇತನ್, ಪ್ರಭಾರಿ ಅಪರ ಜಿಲ್ಲಾಧಿಕಾರಿ ರಾಚಪ್ಪ, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸ್ ಪಿ ಇಶಾಪಂತ್, ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಎಸಿಪಿ ದೀಪನ್ ಎನ್ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು