ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಈ ಹಿಂದೆ ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಗೋಪಾಲಯ್ಯ ಕಾರ್ಯನಿರ್ವಹಿಸುತ್ತಿದ್ದರು. ಅವರು ಹಾಸನ ಮತ್ತು ಮಂಡ್ಯ ಎರಡೂ ಜಿಲ್ಲೆಗಳ ಉಸ್ತುವಾರಿಯಾಗಿದ್ದರು.
ಇದೀಗ ಮಂಡ್ಯ ಜಿಲ್ಲೆಯ ಉಸ್ತುವಾರಿ ಆರ್.ಅಶೋಕ್ ಅವರಿಗೆ ನೀಡಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ನೇಮಕ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ. ಆದರೂ ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿಯಾಗಿ ನೇಮಿಸಿರುವುದು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿವೆ.