ಬೆಂಗಳೂರು: ಕೋವಿಡ್ ನಂತಹ ಕಷ್ಟದ ಕಾಲದಲ್ಲಿ ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಬಜೆಟ್ ನೀಡಿದ್ದಾರೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂ. ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ಹೆಚ್ಚಿನ ಒತ್ತು ನೀಡಿದ್ದಾರೆ. ಬೆಂಗಳೂರಿಗೆ ಹೆಚ್ಚುವರಿ ನೀರು ತರಲು ಯೋಜನೆ ರೂಪಿಸಿದ್ದಾರೆ. ಕಂದಾಯ ಇಲಾಖೆ ಅಡಿ ಜನರಿಗೆ ಅನುಕೂಲ ಆಗುವಂತೆ, ಮಲೆನಾಡಿನ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲು ಒತ್ತು ನೀಡಿದ್ದಾರೆ ಎಂದರು.
ಇದನ್ನೂ ಓದಿ:ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ
ಬಜೆಟ್ ಕಲಾಪಕ್ಕೆ ಕಾಂಗ್ರೆಸ್ ವಿರೋಧ ಮಾಡಿದ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಕೇಂದ್ರದಲ್ಲಿ ಮೋದಿ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ವಿಷಯವಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾಡಲೂ ವಿಚಾರವಿಲ್ಲ. ಹೀಗಾಗಿ ಸುಮ್ಮನೆ ಕಾಂಗ್ರೆಸ್ ವಿರೋಧಕ್ಕಾಗಿ ವಿರೋಧ ಮಾಡಿದೆ ಅಷ್ಟೇ ಎಂದು ಟೀಕಿಸಿದರು.
ಇದನ್ನೂ ಓದಿ: ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಜಾತಿವಾರು ನಿಗಮ, ಮಠಗಳಿಗೆ ವಿಶೇಷ ಅನುದಾನ