Advertisement

ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ: ಅಶೋಕ್

05:00 PM Jun 10, 2020 | keerthan |

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸಾಮನ್ಯ ಕಾರ್ಯರ್ತರಿಗೆ ಟಿಕೆಟ್ ನೀಡಿದ ಕಾರಣ ಕಾಂಗ್ರೆಸ್ ಅಸಮಧಾನ ಶುರುವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಗೆ ಈಗಷ್ಟೇ ಚುನಾವಣೆ ಘೋಷಣೆ ಆಗಿದೆ. ವಿಧಾನ ಪರಿಷತ್ತಿಗೆ ಅವಕಾಶ ಕಲ್ಪಿಸುವ ಬಗ್ಗೆ ಈಗಾಗಲೇ ಯಡಿಯೂರಪ್ಪ ಅವರು ಕೆಲವರಿಗೆ ಮಾತು ಕೊಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯದ ನಾಯಕರು ಚರ್ಚೆ ಮಾಡಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದರು.

ರಾಜ್ಯಸಭೆಗೆ ಬಿಜೆಪಿಯು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಂತೆ ಕುಟುಂಬ ರಾಜ ಕಾರಣಕ್ಕೆ ಮಣೆ ಹಾಕಿಲ್ಲ. ಇದರಿಂದ ಕಾಂಗ್ರೆಸ್ ನಲ್ಲಿ ಈಗಾಗಲೇ ಬಂಡಾಯ ಶುರುವಾಗಿದೆ ಎಂದರು.

ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 29ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶವೂ ಹೊರಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next