ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬುದು ಕಾಂಗ್ರೆಸ್ಸಿಗರದ್ದು ತಿರುಕನ ಕನಸಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಅಧಿಕಾರಕ್ಕೆ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ರದ್ದು ಪಡಿಸುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ ಎಂದರು.
ಇದನ್ನೂ ಓದಿ: ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ: ಬಸವರಾಜ ಬೊಮ್ಮಾಯಿ
ಮತಾಂತರ ನಿಷೇಧ ಕಾಯ್ದೆ ವಿರೋಧಿಸಿರುವ ಕಾಂಗ್ರೆಸ್ ನಾಯಕರು ಬಲವಂತದ ಮತಾಂತರವನ್ನು ಬೆಂಬಲಿಸುತ್ತಿದ್ದಾರೆಯೇ ಎಂಬುದನ್ನು ಸ್ಪಷ್ಟ ಪಡಿಸಲಿ ಎಂದರು.
ಮತಾಂತರ ನಿಷೇಧ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗಿದೆ. ಕಾಂಗ್ರೆಸ್ ಹಿಂದೂಗಳ ವಿರೋಧಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.
ರಾತ್ರಿ ಕರ್ಫ್ಯೂಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿ ಸೇರಿದಂತೆ ಅನೇಕ ಕಡೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದರು.