Advertisement

ಬೋಟ್ ಮೂಲಕ ಪ್ರವಾಹ ಪೀಡಿತ ರೋಜಾ ಗ್ರಾಮಕ್ಕೆ ಸಚಿವ ಆರ್ ಅಶೋಕ್ ಭೇಟಿ

04:22 PM Oct 16, 2020 | keerthan |

ಯಾದಗಿರಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಹಾಮಳೆಗೆ ಭೀಮಾ ನದಿ ಪ್ರವಾಹದಿಂದ ನಡುಗಡ್ಡೆಯಾಗಿರುವ ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಗ್ರಾಮಕ್ಕೆ ಬೋಟ್ ಮೂಲಕ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದರು.

Advertisement

ಈ ಸಂದರ್ಭದಲ್ಲಿ ಸಚಿವರು ಕಂದಾಯ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಮಸ್ಯೆಗೆ ಶಾಶ್ವತ ಪರಿಹಾರವಾಗಲು ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಎಂದು ಆದೇಶಿಸಿದರು.

ಇದನ್ನೂ ಓದಿ:ವಿಜಯಪುರ: ಭೀಮಾ ತೀರದ ತಾರಾಪುರ ಗ್ರಾಮಸ್ಥರನ್ನು ಬಲವಂತವಾಗಿ ಸ್ಥಳಾಂತರಿಸಿದ ಜಿಲ್ಲಾಡಳಿತ

ಸಚಿವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ, ಶಾಸಕ ರಾಜುಗೌಡ, ಮಾಜಿ ಶಾಸಕರಾದ ಗುರುಪಾಟೀಲ್, ಅಮತಪ್ಪ ಕಂದಕೂರ, ಬಿಜೆಪಿ ಜಿಲ್ಲಾ ಡಾ. ಶರಣಭೂಪಾಲರೆಡ್ಡಿ ನಾಯ್ಕಲ್, ತಹಸೀಲ್ದಾರ ಜಗನ್ನಾಥರೆಡ್ಡಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next