Advertisement
ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಡಾ.ಯತೀಂದ್ರ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮೂರು ಸಾವಿರ ಭೂ ಮಾಪಕರ ನೇಮಕದ ನಂತರ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಮೀನುಗಳ ಸರ್ವೇ ಕಾರ್ಯ ತ್ವರಿತವಾಗಿ ನಡಸಲು ಅನುಕೂಲವಾಗಲಿದೆ ಎಂದು ಹೇಳಿದರು.
Related Articles
Advertisement
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಯತೀಂದ್ರ, ಕುಮಾರ್ ಬಂಗಾರಪ್ಪ ಎಲ್ಲ ಕಡೆ ಭೂಮಾಪಕರ ಸಮಸ್ಯೆ ಇದೆ. ಇರುವ ಒಬ್ಬರಿಂದ ಏನೂ ಮಾಡಲು ಸಾಧ್ಯವಿಲ್ಲ. ಲೈಸನ್ಸ್ ಪಡೆದವರು ಎಲ್ಲವನ್ನೂ ಮಾಡಲಾಗದು. ಅವರಿಗೆ ಇತಿಮಿತಿ ಇರುವುದರಿಂದ ಭೂ ವ್ಯಾಜ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಏನಾದರೊಂದು ಪರಿಹಾರ ಹುಡುಕಿ ಎಂದು ಸಲಹೆ ಮಾಡಿದರು.
ಅದಕ್ಕೆ ಉತ್ತರಿಸಿದ ಸಚಿವ ಅಶೋಕ್, ಪರವಾನಗಿ ಹೊಂದಿದ ಭೂ ಮಾಪಕರಿಗೂ ಹಲವು ಅಧಿಕಾರ ಕೊಡಲಾಗಿದೆ. ಇಲಾಖೆಯಲ್ಲಿ ಹಲವು ಬದಲಾವಣೆ ತರಲು ತೀರ್ಮಾನಿಸಿದ್ದು, ಹೊಸಸಾಫ್ಟ್ ವೇರ್ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದರು.