Advertisement

ಆನಂದ ಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು: ಕಂದಾಯ ಸಚಿವ ಆರ್ ಅಶೋಕ

06:01 PM Aug 24, 2021 | Team Udayavani |

ಬೆಂಗಳೂರು: ಸಚಿವ ಆನಂದ್ ಸಿಂಗ್ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಕಂದಾಯ ಆರ್. ಅಶೋಕ್ ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದರು.

Advertisement

ಇಂದು (ಆ.24) ಪ್ರವಾಸೋದ್ಯಮ ಸಚಿವರಾಗಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದ ಸಂಗತಿಯನ್ನು ಮಾಧ್ಯಮಗಳಿಗೆ ತಿಳಿಸಿದ ಅಶೋಕ, “ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಆನಂದಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು. ನಾನು ಈ ಹಿಂದೆ ಅವರನ್ನು ಭೇಟಿಯಾಗಿದ್ದೆ, ಆಗ ಸಮಸ್ಯೆ ಹೇಳಿಕೊಂಡಿದ್ದರು. ಮಾನ್ಯ ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿದ್ದೇವೆ. ಸಿಎಂ ಒಂದು ಅಥವಾ ಎರಡು ದಿನಗಳಲ್ಲಿ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಅಲ್ಲಿ ಅವರು ಸಿಂಗ್ ಜೊತೆಗಿನ ಚರ್ಚೆಯನ್ನು ಪಕ್ಷದ ಹೈಕಮಾಂಡ್‍ಗೆ ತಲುಪಿಸುತ್ತಾರೆ ಎಂದರು.

ನಮ್ಮ ಪಕ್ಷದಲ್ಲಿ ಅಸಮಾಧಾನವೇನು ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಉತ್ತಮ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಆಡಳಿತ ನೀಡಲಾಗುವುದು” ಎಂದು ಆರ್ ಅಶೋಕ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next