Advertisement
ಮುಧೋಳದಲ್ಲಿರುವ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳು, ಹೆರಿಗೆಗೆ ಬಂದವರ ಜೊತೆ ಮಾತುಕತೆ ನಡೆಸಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ, ವೈದ್ಯರು ಮತ್ತು ಸಿಬ್ಬಂದಿ ಸ್ಪಂದನೆ ಸೇರಿದಂತೆ ವ್ಯವಸ್ಥೆಗಳ ವಿಚಾರಿಸಿದರು. ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡದಿದ್ದರೇ ಗಮನಕ್ಕೆ ತರುವಂತೆ ಸಚಿವ ತಿಮ್ಮಾಪೂರ ಅವರು ಸಾರ್ವಜನಿಕರಿಗೆ ತಿಳಿಸಿದರು.
Related Articles
Advertisement
ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಬೆಳಗ್ಗೆ ಡ್ಯೂಟಿ ಡಾಕ್ಟರ್ ಕರ್ತವ್ಯಕ್ಕೆ ಆಗಮಿಸದೇ ಇನ್ನೂ ರಾತ್ರಿ ಪಾಳಿ ವೈದ್ಯರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದರು. ಸರಿಯಾದ ಸಮಯಕ್ಕೆ ಸಿಬ್ಬಂದಿ ಆಗಮಿಸದಿದ್ದಕ್ಕೆ ತರಾಟೆಗೆ ತೆಗೆದುಕೊಂಡರು.
ಅಲ್ಲದೇ ಗರ್ಭಿಣಿಯರು, ಬಾಣಂತಿಯರಿಗೆ, ರೋಗಿಗಳಿಗೆ ನೀಡಬೇಕಾದ ಆಹಾರವನ್ನು ಸರ್ಕಾರದ ಮೆನು ಪ್ರಕಾರ ನೀಡದೇ ನಿರ್ಲಕ್ಷ್ಯ ತೋರುತ್ತಿರುವ ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯಲ್ಲಿನ ವೈದ್ಯರು ಈ ವಿಚಾರದಲ್ಲಿ ಬೇಜವಾಬ್ದಾರಿ ತೋರಿರುವುದಕ್ಕೆ ಸಿಡಿಮಿಡಿಗೊಂಡ ಸಚಿವರು, ಎಲ್ಲಾ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.