Advertisement
ಗುರುವಾರ ಕೆಕೆಆರ್ ಡಿಬಿ 20 ಕೋ.ರೂ ಅನುದಾನದಲ್ಲಿ ನಿರ್ಮಾಣ ಗೊಂಡ ಕಲಬುರಗಿ ನಗರ ಸಾರಿಗೆ ಬಸ್ ನಿಲ್ದಾಣದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
Related Articles
Advertisement
ಕೆ.ಕೆ.ಆರ್.ಟಿ.ಸಿ. ಸಂಸ್ಥೆಗೆ ಈಗಾಗಲೆ 630 ಬಸ್ ನೀಡಲಾಗಿದೆ. ಮುಂದಿನ ದಿನದಲ್ಲಿ ಮತ್ತೆ 485 ಬಸ್ ನೀಡಲಾಗುವುದು. ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಸಿ.ಎಂ. ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಮತ್ತು ಕೆ.ಕೆ.ಆರ್.ಟಿ.ಸಿ. ಸಂಸ್ಥೆಯಲ್ಲಿನ ಸಾರಿಗೆ ನೌಕರರು ಅಪಘಾತದಲ್ಲಿ ಮರಣ ಹೊಂದಿದಲ್ಲಿ 1 ಕೋಟಿ ರೂ. ಜೀವ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಿದ್ದು, ಇದು ದೇಶದಲ್ಲಿಯೆ ಮಾದರಿಯಾಗಿದೆ. ಒಂದೆಡೆ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಬೇಕು. ಇನ್ನೊಂದೆಡೆ ಕಾರ್ಮಿಕರ ಹಿತವು ಕಾಯಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ ಎಂದರು.
ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಈಶಾನ್ಯ ಭಾಗದ ಜಿಲ್ಲೆಗಳು ಬೆಂಗಳೂರಿಗೆ 600 ಕಿ.ಮೀ. ದೂರದಲ್ಲಿರುವ ಕಾರಣ ಮತ್ತು ಓಡಾಟ ಹೆಚ್ಚಿರುವುದರಿಂದ ವೋಲ್ವೋ, ಎ.ಸಿ. ಬಸ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಓಡಿಸುವಂತೆ ಎಂ.ಡಿ. ಅವರಿಗೆ ಸೂಚನೆ ನೀಡಿದ್ದೇನೆ. ಪರಿಣಾಮ ಈಗ ಎ.ಸಿ. ನಾನ್ ಎ.ಸಿ. ಸ್ಲೀಪರ್ ಬಸ್‍ಗಳಿಗೆ ಚಾಲನೆ ನೀಡಿದ್ದೇವೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ ಹಿಂದೆ ತಾವು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾಗಿದ್ದಾಗ 5 ಕೋಟಿ ರೂ. ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ನೀಡಿದೆ. ಮುಂದೆ ಮಂಡಳಿಯಿಂದ ಉಳಿದ 15 ಕೋಟಿ ರೂ. ನೀಡಿ ಸುಸಜ್ಜಿತ ಬಸ್ ನಿಲ್ದಾಣ ಪೂರ್ಣಗೊಳಿಸಲಾಗಿದೆ. ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ನಿರ್ಮಾಣದಿಂದ ವಿವಿಧ ಗ್ರಾಮೀಣ ಭಾಗದಿಂದ ನಗರಕ್ಕೆ ಓಡಾಡುವ ಹಳ್ಳಿ ಜನರಿಗೆ ತುಂಬಾ ಅನುಕೂಲವಾಗಿದೆ ಎಂದರು.
ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ, ಮಂಡಳಿಯಿಂದಲೆ 20 ಕೋಟಿ ರೂ. ವೆಚ್ಚದಲಿತೀ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕೆ.ಕೆ.ಆರ್.ಟಿ.ಸಿ ಸಂಸ್ಥೆಗೆ 120 ಬಸ್ ಖರೀದಿಗೆ ಮಂಡಳಿಯಿಂದ 50 ಕೋಟಿ ರೂ. ನೀಡಲಾಗುವುದು. ಇತ್ತೀಚೆಗೆ ಮಂಡಳಿಯಲ್ಲಿ ಒಂದು ನಿರ್ಣಯ ತೆಗೆದುಕೊಂಡಿದ್ದು ಶೇ.1/3 ಭಾಗ ಮಂಡಳಿ ಅನುದಾನ ನೀಡಿದರೆ, ಉಳಿದ 2/3 ಭಾಗ ಸಂಬಂಧಪಟ್ಟ ಇಲಾಖೆ ನೀಡಬೇಕು. ಹೀಗಾಗಿ ಬಸ್ ಖರೀದಿಗೆ ಉಳಿದ ಹಣ ಸರ್ಕಾರ ನೀಡಬೇಕೆಂದು ಸಚಿವ ರಾಮಲಿಂಗಾರೆಡ್ಡಿಗೆ ಅವರಿಗೆ ಕೋರಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ ಕಲಬುರಗಿ ಮಹಾನಗರ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ 1,200 ಬಸ್ ನಿರಂತರ ಕಾರ್ಯಾಚರಣೆ ಮಾಡುತ್ತಿವೆ. ಪರಿಣಾಮ ನಗರದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಪರಿಸರ ಮಾಲಿನ್ಯ ಹೆಚ್ಚಿದೆ. ಇದನ್ನು ತಡೆಯಲು ಕಲಬುರಗಿ ನಗರದ ನಾಲ್ಕು ರಿಂಗ್ ರಸ್ತೆಯಲ್ಲಿ ಅಂದರೆ ಜೇವರ್ಗಿ ರಸ್ತೆ, ಹುಮನಾಬಾದ ರಸ್ತೆ, ಆಳಂದ ರಸ್ತೆ, ಸೇಡಂ ರಸ್ತೆಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿಕೊಂಡರು.
ಮುಖ್ಯಮಂತ್ರಿ ಚಿನದ ಪದಕ ವಿತರಣೆ: ಕಾರ್ಯಕ್ರಮದಲ್ಲಿ ಅಪಘಾತ ರಹಿತ ಸೇವೆ ಸಲ್ಲಿಸಿದ 6 ಜನರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಮತ್ತು ಕಲಬುರಗಿ ವಿಭಾಗ-1 ಹಾಗೂ 2ರ 121 ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಭಾಗವಾಗಿ ಸಾಂಕೇತಿಕವಾಗಿ ಇಬ್ಬರಿಗೆ ಬೆಳ್ಳಿ ಪದಕ ವಿತರಿಸಲಾಯಿತು. ಇದಲ್ಲದೆ ಎಜಾಜ್ ಅಹ್ಮದ್, ರೇವಣಸಿದ್ದಪ್ಪ ಅವರಿಗೆ ಅನುಕಂಪದ ನೇಮಕಾತಿ ಅದೇಶ ಪತ್ರ ನೀಡಲಾಯಿತು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಜನ ಅಧಿಕಾರಿ-ಸಿಬ್ಬಂದಿಗಳ ಅವಲಂಭಿತರಿಗೆ ತಲಾ 10 ಲಕ್ಷ ರೂ.ಗಳಂತೆ ಒಟ್ಟು 80 ಲಕ್ಷ ರೂ. ಗಳ ಆಂತರಿಕ ಗುಂಪು ವಿಮಾ ಪರಿಹಾರದ ಚೆಕ್‍ಗಳನ್ನು ಸಹ ವಿತರಣೆ ಮಾಡಲಾಯಿತು.
ಕಲ್ಯಾಣ ರಥಕ್ಕೆ ಚಾಲನೆ: ಸಮಾರಂಭಕ್ಕೂ ಮುನ್ನ ಸಚಿವ ಅವರು ಕಲ್ಯಾಣ ರಥ (ಎ.ಸಿ. ಸ್ಲೀಪರ್) ಮತ್ತು ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್ಸುಗಳ ಲೋಕಾರ್ಪಣೆ ಮಾಡಿದರು.
ಸಮಾರಂಭದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಎಂ.ಎಲ್.ಸಿ. ತಿಪ್ಪಣ್ಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಕೆ.ಕೆ.ಆರ್.ಟಿ.ಸಿ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಕುಮಾರ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ದೇವರಾಜ, ಸಿ.ಎಂ.ಇ ಸಂತೋಷಕುಮಾರ ಗೊಗೋರೆ, ಮುಖ್ಯ ಭದ್ರತಾ ಮತ್ತು ವಿಜಿಲೆನ್ಸ್ ಅಧಿಕಾರಿ ಆನಂದ ಬಂದರಕಳ್ಳಿ, ಮುಖ್ಯ ಲೆಕ್ಕಾಧಿಕಾರಿ ಬಸವರಾಜ ಬೆಳಗಾವಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಈಶ್ವರ ಹೊಸಮನಿ, ಗಂಗಾಧರ, ಡಿ.ಸಿ.ಸಿ. ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಇತರೆ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು ಇದ್ದರು. ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಇದನ್ನೂ ಓದಿ: Hunsur: ಅಣ್ಣನ ಹೆಸರಲ್ಲಿ ತಮ್ಮ ಸರಕಾರಿ ಕೆಲಸ; ಕೆಲಸದಿಂದ ವಜಾಗೊಳಿಸಿ ಡಿಡಿಪಿಐ ಆದೇಶ