Advertisement
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ತೆಲಂಗಾಣ ಸರ್ಕಾರವು ಹೊಸ ತಗಾದೆ ತೆಗೆದಿದೆ. ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣವು ಈಗಾಗಲೇ ಅಂತಿಮ ತೀರ್ಪನ್ನೂ ಸಹಾ ನೀಡಿದೆ. 2013ರಲ್ಲಿಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಅಖಂಡ ಆಂಧ್ರ ಪ್ರದೇಶ ರಾಜ್ಯಗಳಿಗೆ ನೀರು ಹಂಚಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವೂ ನಿರ್ಧರಿಸಿದೆ. ಹೀಗಾಗಿ ನೀರು ಹಂಚಿಕೆ ವಿಷಯದಲ್ಲಿ ಹೊಸದಾಗಿ ನ್ಯಾಯಾಧಿಕರಣ ಸ್ಥಾಪಿಸಬೇಕೆಂದು ತೆಲಂಗಾಣ ಸರ್ಕಾರದ ವಾದ ಅತಾರ್ತಿಕವಾಗಿದೆ ಎಂದಿದ್ದಾರೆ. Advertisement
ಮಹದಾಯಿ- ಕೃಷ್ಣಾ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ರಮೇಶ್ ಜಾರಕಿಹೊಳಿ ಚರ್ಚೆ
03:23 PM Oct 10, 2020 | keerthan |
Advertisement
Udayavani is now on Telegram. Click here to join our channel and stay updated with the latest news.