Advertisement

ಕಾನೂನು ಕ್ರಮಕ್ಕೆ ಸೂಚನೆ: ಸಚಿವ ಎಸ್‌. ಅಂಗಾರ

12:37 AM Oct 23, 2022 | Team Udayavani |

ಮಂಗಳೂರು: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

Advertisement

ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು ಪ್ರಕರಣವನ್ನು ತಿರುಚಿ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕರ ದಲಿತ ವಿರೋಧಿ ನೀತಿ ಇದರಿಂದ ಬಹಿರಂಗವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next