Advertisement

Minister ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆಸ್ಪತ್ರೆಗೆ ದಾಖಲಾಗಿಲ್ಲ: ಡಾ. ಪ್ರಭಾ

06:13 PM May 31, 2024 | Team Udayavani |

ದಾವಣಗೆರೆ: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಯಾದ ಬೆನ್ನಲ್ಲೇ ಅವರ ಪತ್ನಿ, ಎಸ್ ಎಸ್ ಕೇರ್ ಟ್ರಸ್ಟ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾಧ್ಯಮ‌ ಹೇಳಿಕೆ ನೀಡಿದ್ದು ”ಇದು ಸತ್ಯಕ್ಕೆ ದೂರವಾಗಿದೆ”ಎಂದು ಹೇಳಿದ್ದಾರೆ.

Advertisement

ಶುಕ್ರವಾರ ಮಧ್ಯಾಹ್ನ ಕೆಲವು ಮಾಧ್ಯಮಗಳಲ್ಲಿ ಮಲ್ಲಿಕಾರ್ಜುನ್ ರವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ಪ್ರಸಾರ ವಾಗಿತ್ತು.

ಸಚಿವರು ಆರೋಗ್ಯವಾಗಿದ್ದು ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು, ಎಸ್.ಎಸ್.ಎಂ ಅಭಿಮಾನಿಗಳು ಹಾಗೂ ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು ಎಂದು ಡಾ. ಪ್ರಭಾ ಮನವಿ ಮಾಡಿದ್ದಾರೆ.

ಶಿವಶಂಕರಪ್ಪ ಬೆಂಗಳೂರಿಗೆ
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94 ವರ್ಷ) ಅವರ ಆರೋಗ್ಯದಲ್ಲಿ ಶುಕ್ರವಾರ ತೀವ್ರ ಸುಸ್ತು ಕಾಣಿಸಿಕೊಂಡಿದ್ದರಿಂದ ಸಂಜೆ ಹೆಚ್ಚಿನ ತಪಾಸಣೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಮಧ್ಯಾಹ್ನ ತೀವ್ರ ಸುಸ್ತು ಎಂದಿದ್ದರಿಂದ ಕೂಡಲೇ ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಸಾಮಾನ್ಯ ತಪಾಸಣೆ ಮಾಡಲಾಯಿತು. ಯಾವುದೇ ಗಂಭೀರ ಸಮಸ್ಯೆ ಕಂಡು ಬಂದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ತಪಾಸಣೆ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ.

ಶಾಮನೂರು ಶಿವಶಂಕರಪ್ಪ ಅವರಿಗೆ ವಯೋಸಹಜ ಸುಸ್ತು ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಸಾಮಾನ್ಯ ತಪಾಸಣೆ ನಡೆಸಿ, ಹೆಚ್ಚಿನ ತಪಾಸಣೆಗೆ ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರ ಆರೋಗ್ಯದಲ್ಲಿ ಉಸಿರಾಟ ಸಮಸ್ಯೆಯಾಗಲಿ, ಬೇರೆ ಯಾವುದೇ ಸಮಸ್ಯೆಯಾಗಲಿ ಕಂಡು ಬಂದಿಲ್ಲ. ಹಿರಿಯ ಶಾಸಕರು ಆರೋಗ್ಯವಾಗಿದ್ದಾರೆ ಎಂದು ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಉದಯವಾಣಿ ಗೆ ಸ್ಪಷ್ಟಪಡಿಸಿದ್ದಾರೆ.

Advertisement

ವದಂತಿ ತಂದ ಆತಂಕ

ಕೆಲವು ಮಾಧ್ಯಮಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಭಾರಿ ಏರುಪೇರಾಗಿದೆ ಎಂದು ಪ್ರಸಾರವಾದರೆ, ಮತ್ತೆ ಕೆಲವು ಮಾಧ್ಯಮಗಳಲ್ಲಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಏರ್ ಲಿಫ್ಟ್ ಮಾಡಲಾಗಿದೆ ಎಂಬ ವರದಿ ಪ್ರಸಾರವಾಗಿ, ಅದು ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗಿತ್ತು. ಇದು ಅಭಿಮಾನಿಗಳು, ಹಿತೈಷಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರಿ ಆತಂಕ ಸೃಷ್ಟಿಸಿತ್ತು. ಅನೇಕರು ಶಾಮನೂರು ಮನೆಯತ್ತ ಸಹ ಧಾವಿಸಿದ್ದರು.

ಶಾಮನೂರು ಶಿವಶಂಕರಪ್ಪ ಅವರ ಸೊಸೆ, ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಎಲ್ಲರಿಗೂ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದ ಕುರಿತು ನಿಖರ ಮಾಹಿತಿ ನೀಡಿ, ಆತಂಕ ದೂರ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next