Advertisement
ಈ ಸಂದರ್ಭದಲ್ಲಿ ಬಿಎಲ್‌ಬಿಸಿಯ ಘಟಪ್ರಭಾ, ಜಮಖಂಡಿ, ಬೀಳಗಿ ವಿಭಾಗದ ಅಧಿಕಾರಿಗಳೊಂದಿಗೆ ಮತ್ತು ರೈತರೊಂದಿಗೆ ಮಾತನಾಡಿದ ಅವರು ಈ ವರ್ಷ ಬರಗಾಲ ಇರುವ ಕಾರಣ ಪ್ರತಿವರ್ಷದಂತೆ ಹಿಡಕಲ್ ಜಲಾಶಯದಿಂದ ನಿಗದಿತ ಪ್ರಮಾಣದಲ್ಲಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದೇ ಜನವರಿ 1 ರಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಘಟಪ್ರಭಾ ಎಡದಂಡೆ ಕಾಲುವೆಗೆ ಸಂಬಂಧಿಸಿದ ಅಕಾರಿಗಳು ಆದ್ಯತೆಯ ಮೇರೆಗೆ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮಗಳಲ್ಲಿನ ಕೆರೆಗಳನ್ನು ತುಂಬಿಸುವದರ ಜೊತೆಗೆ ಘಟಪ್ರಭಾ ಎಡದಂಡೆ ಮುಖ್ಯಕಾಲುವೆಯ ಕೊನೆಯ ಹಂತ (ಬೀಳಗಿ ವಿಭಾಗ) ದವರೆಗೂ ನೀರನ್ನು ಹರಿಸಲು ಅಧಿಕಾರಿಗಳೊಂದಿಗೆ ರೈತರು ಸಹಕಾರ ನೀಡಬೇಕಾಗಿದ್ದು ಅವಶ್ಯವಾಗಿದೆ ಎಂದರು.
ಕುಡಿಯುವ ಉದ್ದೇಶಕ್ಕಾಗಿ ಈಗ ಘಟಪ್ರಭಾ ಎಡದಂಡೆ ಹರಿಸುತ್ತಿರುವ ನೀರನ್ನು ಜ.15 ರವರೆಗೆ ಹರಿಸಲಾಗುವದು. ಜಿಎಲ್‌ಬಿಸಿ ಜಮಖಂಡಿ ವೃತ್ತದ ಅಡಿಯಲ್ಲಿ ಬರುವ ಎಲ್ಲಾ ವಿಭಾಗದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಬೀಳಗಿ ಕೊಣೆಯ ಭಾಗದವರೆಗೆ ಸಮರ್ಪಕ ನೀರು ಪೋರೈಸುವ ಕಾರ್ಯವನ್ನು ಅಧಿಕಾರಿಗಳು ಕೈಗೊಳ್ಳಬೇಕು ಅವಶ್ಯವೆನಿಸಿದರೆ ಇತರೆ ಇಲಾಖೆಗಳ ಸಹಕಾರ ಪಡೆದು ಎಲ್ಲ ಭಾಗಗಳ ಕೆರೆ, ಬಾಂದಾರ, ಚೆಕ್ ಡ್ಯಾಂಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಈ ಭಾಗದಲ್ಲಿ ಹಲವು ಕೆರೆಗಳು ಭರ್ತಿಯಾಗಿವೆ ಇನ್ನು ಕೆಲವು ಕೆರೆಗಳಿಗೆ ನೀರು ಪೋರೈಕೆಯಾಗುತ್ತಿಲ್ಲ ರಾಯಭಾಗ ಭಾಗದಿಂದ ಈ ಕೆಳಗಿನ ಭಾಗಕ್ಕೆ ನೀರು ಸಮರ್ಪಕವಾಗಿ ಬರುತ್ತಿಲ್ಲ ಹೀಗಾಗಿ ಬೀಳಗಿ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಹಲವು ರೈತರು ಅಧಿಕಾರಿಗಳು ಸಚಿವರಿಗ ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮಾತನಾಡಿ ನೀರು ತಲುಪಿದ ಭಾಗದಲ್ಲಿ ನೀರು ಹರಿಸುವುದನ್ನು ನಿಲ್ಲಿಸಿ, ತಲುಪದ ಕಡೆ ಮಾತ್ರ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement