Advertisement

­ನನ್ನ ತ್ಯಾಗದಿಂದಲೇ ಪೂಜಾರ ಶಾಸಕರಾಗಿದ್ದು: ಶಂಕರ

09:41 PM Jul 19, 2021 | Team Udayavani |

ರಾಣಿಬೆನ್ನೂರ: ನನ್ನ ತ್ಯಾಗದಿಂದಾಗಿ ಈ ಕ್ಷೇತ್ರದ ಶಾಸಕನಾಗಲು ಅರುಣಕುಮಾರ ಪೂಜಾರ ಅವರಿಗೆ ಸಾಧ್ಯವಾಗಿದೆ. ನಾನು ಎಂಬುದನ್ನು ನಾನೂ ಬಿಡಬೇಕು, ಅವರೂ ಬಿಡಬೇಕು. ಆಗ ಮಾತ್ರ ತಾಲೂಕಿನ ಅಭಿವೃದ್ಧಿ ಸಾಧ್ಯ. ಇಬ್ಬರೂ ಒಗ್ಗೂಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಮಾಡಲು ಮುಂದಾಗುತ್ತೇವೆ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್‌. ಶಂಕರ ಹೇಳಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರುವ ಸಲುವಾಗಿ ಸಮ್ಮಿಶ್ರ ಸರ್ಕಾರದಲ್ಲಿ ರಾಜೀನಾಮೆ ನೀಡಿದಾಗ ಅನರ್ಹತೆಗೆ ಗುರಿಯಾಗಿದ್ದೆನು. ಆ ಸಮಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಾಲೂಕಿನ ಅಭಿವೃದ್ಧಿಗಾಗಿ 35 ಕೋಟಿ ಹಣ ಬಿಡುಗಡೆ ಮಾಡಿದ್ದರು. ಆ ಹಣದಲ್ಲಿ ಕ್ಷೇತ್ರದಲ್ಲಿ ಇದೀಗ ಕೆಲಸಗಳು ನಡೆಯುತ್ತಿವೆ. ನಂತರ ನಾನು ಚುನಾವಣೆಗೆ ಸ್ಪರ್ಧಿಸದೇ ಅರುಣಕುಮಾರ ಪೂಜಾರಗೆ ಅವಕಾಶ ಮಾಡಿಕೊಟ್ಟಿದ್ದು, ಅವರನ್ನು ಕ್ಷೇತ್ರದ ಮತದಾರರು ಗೆಲ್ಲಿಸಿದ್ದಾರೆ. ಇದರಲ್ಲಿ ನನ್ನದೂ ಶ್ರಮವಿದೆ ಎಂದರು. ಕೆರೆ ತುಂಬಿಸುವ ಯೋಜನೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಪಕ್ಷದ ಕಾರ್ಯಕರ್ತರೊಬ್ಬರು ಕಳಪೆ ಕಾಮಗಾರಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸರಿಯಲ್ಲ. ಅವರಿಗೆ ಬುದ್ಧಿವಾದ ಹೇಳಿರುವೆ. ಅಲ್ಲದೇ ಅಧಿ ಕಾರಿಗಳು ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆಗೆ ನಾನಿಲ್ಲದ ಸಮಯ ನಿಗದಿ ಮಾಡಿ ಭೂಮಿಪೂಜೆ ನೆರವೇರಿಸುತ್ತಿರುವುದು ನನ್ನ ಅಭಿಮಾನಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ರಿಂಗ್‌ರೋಡ್‌, ಮುದೇನೂರ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್‌ ನಿರ್ಮಿಸುವ ಚಿಂತನೆಯಿದೆ. ಕೆರೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳು 206 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಕರೆಸಿ ಅವರಿಂದಲೇ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕುರಿತು ಶಾಸಕರ ಜತೆ ಮಾತನಾಡಿ ಸಮಯ ನಿಗ ದಿ ಮಾಡುತ್ತೇವೆ ಎಂದರು.

ನಗರ ಹಾಗೂ ಗ್ರಾಮೀಣ ಭಾಗದ ಕೆಲವೆಡೆ ಕಾಮಗಾರಿಗಳು ಕಳಪೆಯಾಗಿರುವ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿವೆ. ಅ ಧಿಕಾರಿಗಳು ಕೂಡಲೇ ಇದನ್ನು ಸರಿಪಡಿಸಬೇಕು. ಇಲ್ಲವಾದರೆ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ರಾಜು ಅಡಿವೆಪ್ಪನವರ, ಜಗದೀಶ ಎಲಿಗಾರ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next