Advertisement

Chikkaballapura; ಆಪರೇಷನ್ ಹಸ್ತದ ಬಗ್ಗೆ ಸಚಿವ ಶರಣಪ್ರಕಾಶ ಪಾಟೀಲ್ ಪರೋಕ್ಷ ಅಸಮಾಧಾನ

02:37 PM Sep 01, 2023 | Team Udayavani |

ಚಿಕ್ಕಬಳ್ಳಾಪುರ: ನಮ್ಮ ಮಾತು, ಕೆಲಸ ಜನರಿಗೆ ಉಪಯೋಗ ಆಗುವುದರ ಕಡೆಯಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

Advertisement

ತಾಲೂಕಿನ ಮುದ್ದೇನಹಳ್ಳಿಯ ಎಸ್ಎಂವಿ ಸಮಾಧಿ‌ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ ನಂತರ ಮುದ್ದೇನಹಳ್ಳಿ ವಿಟಿಯು ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಆಪರೇಷನ್ ಹಸ್ತದ ಬಗ್ಗೆ ಕೇಳಿದ ಪ್ರಶ್ನೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಪತ್ರಕರ್ತರು ಕೂಡ ಜನರ ಅಭಿವೃದ್ಧಿ ಬಗ್ಗೆ ಏನಾದರೂ ಪ್ರಶ್ನೆಗಳನ್ನು ಕೇಳಬೇಕೆಂದು‌ ವಿನಂತಿಸಿದರು.

ಕಾವೇರಿ ನದಿ ನೀರಿನ ವಿಚಾರದಲ್ಲಿ ನಮ್ಮ ಸರ್ಕಾರ ರೈತರ ಹಿತ ಕಾಪಾಡಲಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲಿದೆ ಎಂದರು. ಆಗಸ್ಟ್ ತಿಂಗಳಲ್ಲಿ ಈ ವರ್ಷ ಮಳೆ ಸಾಕಷ್ಟು ಕಡಿಮೆ ಆಗಿದೆ. ನೂರು ವರ್ಷಗಳಲ್ಲಿ ಈ ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಕುಸಿದಿದೆ ಎಂದರು.

ಇದನ್ನೂ ಓದಿ:Court Verdict: 1995ರ ಜೋಡಿ ಕೊಲೆ: ಮಾಜಿ ಸಂಸದ ಪ್ರಭುನಾಥ್ ಸಿಂಗ್ ಗೆ ಜೀವಾವಧಿ ಶಿಕ್ಷೆ

Advertisement

ಸೆ.4 ರಂದು‌ ಸಚಿವ ಸಂಪುಟದ ಉಪ ಸಮಿತಿ ಸಭೆಯಿದೆ. ಸಭೆಯಲ್ಲಿ ‌ಬರ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ಬರ ಪೀಡಿತ ಜಿಲ್ಲೆ ಹಾಗೂ ತಾಲೂಕುಗಳ ಘೋಷಣೆ ನಡೆಯಲಿದ್ದು ನಂತರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಸರ್ಕಾರ ಹಮ್ಮಿಕೊಳ್ಳಲಿದೆ. ಬರದ ಬಗ್ಗೆ ಸರ್ಕಾರ ನಿರಂತರವಾಗಿ ನಿಗಾ ಇಟ್ಟಿದೆ. ಕಂದಾಯ ಸಚಿವರು ಅಧಿಕಾರಿಗಳ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಎಂದರು.

ಈಗಾಗಲೇ ಚಿಕ್ಕಬಳ್ಳಾಪುರ ವೈದ್ಯಯ ಕಾಲೇಜ್ ಕಟ್ಟಡ ವೆಚ್ಚದ ಹೆಚ್ಚಳದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ವರ್ಷದಲ್ಲಿ ಹೊಸ ಕಟ್ಟಡದಲ್ಲಿ ಕಾಲೇಜು ಆರಂಬಿಸಬೇಕೆಂಬ ಚಿಂತನೆ ಇದೆ ಎಂದರು.

ಈ ವೇಳೆ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಶಾಸಕ ಪ್ರದೀಪ್ ಈಶ್ವರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next