Advertisement

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಪಕ್ಷ ತೀರ್ಮಾನಿಸಲಿದೆ : ಸಚಿವ ಶ್ರೀರಾಮುಲು

02:31 PM Jun 23, 2021 | Team Udayavani |

ಚಿತ್ರದುರ್ಗ : ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸುವ ಪ್ರಶ್ನೆಯಿಲ್ಲ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

Advertisement

ನಗರದಲ್ಲಿಂದು ಮಾಧ್ಯಮಗಳ ಎದುರು ಮಾತಾಡಿದ ಸಚಿವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಾಣ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ. ಸಿಎಂ ಬದಲಾವಣೆ ಬಗ್ಗೆ ಸಿದ್ಧರಾಮಯ್ಯ ಭವಿಷ್ಯ ಹೇಳುತ್ತಿದ್ದಾರೆಯೇ? ಎಂದು ಪ್ರಶ್ನಿಸಿದರು.

ಮೋದಿ ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರವುದಿಲ್ಲ. ತಾಕತ್ತಿದ್ದರೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಡಿಕೆಶಿ ಅಥವಾ ಸಿದ್ಧರಾಮಯ್ಯ ಘೋಷಿಸಲಿ ಎಂದು ಘೋಷಿಸಲಿ ಎಂದು ಬಹಿರಂಗ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next