ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಈ ಕುರಿತು ಪ್ರತಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯಲ್ಲಾಪುರ , ಮುಂಡಗೋಡ , ಬನವಾಸಿ ಭಾಗದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ 27.40 ಕೋಟಿ ರೂ. ವಿಶೇಷ ಅನುದಾನವು ಮಂಜೂರಾಗಿದೆ ಎಂದು ತಿಳಿಸಿದ್ದಾರೆ.
ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯ ಸಂಕಲ್ಪಕ್ಕೆ ಪೂರಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿನ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.