Advertisement

ರಾಜ್ಯದಲ್ಲಿ ಇನ್ನು ಮುಂದೆ ಲಾಕ್ ಡೌನ್ ಪರಿಸ್ಥಿತಿ ಮುಂದುವರಿಯುವುದಿಲ್ಲ: ಶಿವರಾಮ್ ಹೆಬ್ಬಾರ್

03:14 PM Jun 22, 2020 | keerthan |

ಬೆಳಗಾವಿ: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸರಕಾರ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಲಾಕ್ ಡೌನ್ ಪರಿಸ್ಥಿತಿ ಮುಂದುವರಿಯುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

Advertisement

ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸೋಮವಾರ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅವರು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು ಕಾರ್ಮಿಕರು ಧೈರ್ಯವಾಗಿ ಹೋಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ರಾಷ್ಟ್ರದ ಪ್ರಗತಿಗಾಗಿ ಗಟ್ಟಿಯಾದ ಹೆಜ್ಜೆಗಳನ್ನು ಇಡಬೇಕಾದ ಸಂದರ್ಭದಲ್ಲಿ ನಾವೆಲ್ಲರೂ ಇದ್ದೇವೆ’ ಎಂದರು.

ಶಿಕ್ಷಣ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲೂ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಕಡಿಮೆ ಮಾಡಲಾಗುತ್ತದೆ. ಮಕ್ಕಳ ವಿಷಯದಲ್ಲಿ ಪ್ರಧಾನಿಗಳು ಹಾಗೂ ಮುಖ್ಯಮಂತ್ರಿಗಳು ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಒಂದು ವರ್ಷ ಮಕ್ಕಳ ಭವಿಷ್ಯವನ್ನು ಕಳೆದು ಕೊಳ್ಳುತ್ತೇವೆ. ಆದರೆ, ಒಂದು ಮಗುವನ್ನೂ ಕೋವಿಡ್-19ನಿಂದ ಕಳೆದುಕೊಳ್ಳುವುದಕ್ಕೆ ಸಿದ್ಧವಿಲ್ಲ ಎಂದು ಹೇಳಿದರು.

ಮಕ್ಕಳು ಹಾಗೂ ಪೋಷಕರ ಮೇಲೆ ಏನನ್ನೂ ಹೇರಿಕೆ ಮಾಡುವುದಿಲ್ಲ. ಎಲ್ಲಿಯವರೆಗೆ ಪೋಷಕರಲ್ಲಿ ಧೈರ್ಯ ಬರುವುದಿಲ್ಲವೋ ಅಲ್ಲಿವರೆಗೆ ಶಾಲೆಯನ್ನು ಆರಂಭ ಮಾಡುವಂತಹ ಹುಚ್ಚು ನಿರ್ಣಯ ಮಾಡುವುದಕ್ಕೆ ಸರ್ಕಾರ ತಯಾರಿಲ್ಲ. ಸಚಿವ ಸಂಪುಟದಲ್ಲಿ ಈ ಬಗ್ಗೆ ಹಲವು ಬಾರಿ ಚರ್ಚಿಸಲಾಗಿದೆ. ಕೆಎಸ್‌ಆರ್‌ಟಿ ಸಿ ಬಸ್ ಓಡಿಸುತ್ತಿದ್ದೇವೆ. ಆದರೆ ಜನರೇ ಬರುತ್ತಿಲ್ಲ. ಹೀಗಾಗಿ ಜನರಿಗೆ ಧೈರ್ಯ ಬರುವವರೆಗೂ ಶಾಲೆಗಳನ್ನು ಆರಂಭಿಸುವುದು ಸರಿಯಲ್ಲ ಎಂದು ನಿರ್ಣಯ ಮಾಡಿದ್ದೇವೆ’ ಎಂದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮಕ್ಕಳ ಸುರಕ್ಷತೆಗಾಗಿ ಎಲ್ಲ ರೀತಿಯ ‌ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸಹಕಾರ ಕೊಡಬೇಕು. ಜನಪ್ರತಿನಿಧಿಗಳು ಕೂಡ ನೆರವಾಗಬೇಕು ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next