Advertisement

ಡಾ.ಕಮಲಾ ಹಂಪನಾ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

03:03 PM Jun 22, 2024 | Team Udayavani |

ಕೊಪ್ಪಳ: ಕನ್ನಡದ ಹಿರಿಯ ಸಾಹಿತಿ ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Advertisement

ಡಾ. ಕಮಲಾ ಹಂಪನಾ ಅವರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ, ಕಥೆ , ಕಾದಂಬರಿ, ವಿಮರ್ಶೆ, ವೈಚಾರಿಕ ಸಾಹಿತ್ಯ, ಶಿಶು ಸಾಹಿತ್ಯ, ಅನುವಾದ ಹಾಗೂ ಸಂಶೋಧನಾ ಸಾಹಿತ್ಯ ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಅಮೂಲ್ಯವಾದ ಕೃತಿಗಳನ್ನು ರಚಿಸಿದ್ದ ಡಾ. ಕಮಲಾ ಹಂಪನಾ ಅವರು ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಹಾಗೂ ಮೈಸೂರು ವಿಶ್ವವಿದ್ಯಾಲಯ, ಹಂಪಿ ವಿಶ್ವವಿದ್ಯಾಲಯ ಮುಂತಾದ ಕಡೆಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಬಹಳ ದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದಾರೆ.

71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ನಾಡೋಜ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರ ಇಡೀ ಕುಟುಂಬ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನ ನೀಡುತ್ತಿದೆ. ಭಗವಂತ ಅವರ ಕುಟುಂಬಕ್ಕೆ ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಕನ್ನಡ ಸಾಂಸ್ಕೃತಿಕ ಲೋಕ ಅವರನ್ನು ಸದಾ ಗೌರವಪೂರ್ವಕವಾಗಿ ನೆನಪಿಸಿಕೊಳ್ಳುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next