Advertisement

ಸಚಿವ ಶ್ರೀಮಂತ ಪಾಟೀಲ್ ಗೆ ಕೋವಿಡ್-19 ಸೋಂಕು ದೃಢ

01:20 PM Oct 02, 2020 | keerthan |

ಬೆಂಗಳೂರು: ರಾಜ್ಯದ ರಾಜಕಾರಣಿಗಳಿಗೆ ಕೋವಿಡ್-19 ಸೋಂಕು ಕಾಟ ಹೆಚ್ಚುತ್ತಿದೆ. ಇದೀಗ ರಾಜ್ಯದ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ್ ಗೂ ಸೋಂಕು ದೃಢವಾಗಿದೆ.

Advertisement

ಈ ಬಗ್ಗೆ ಸ್ವತಃ ಸಚಿವರೇ ಟ್ವೀಟರ್ ಮೂಲಕ ತಿಳಿಸಿದ್ದಾರೆ. ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಮಾಸ್ಕ್ ಧರಿಸದ ಜನರಿಂದ 10 ದಿನದಲ್ಲಿ 11 ಲಕ್ಷ ದಂಡ ವಸೂಲಿ!

ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ. ಕಳೆದ ಎರಡು ಮೂರು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಶ್ರೀಮಂತ ಪಾಟೀಲ್ ವಿನಂತಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next