Advertisement
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಕುರಿತು ಸಮಜಾಯಿಷಿ ನೀಡಿದರು. ಸರ್ಕಾರ ರಚನೆಯಾದ ಬಳಿಕ ಸಚಿವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಕೇರಳ ಮಾಜಿ ಮುಖ್ಯಮಂತ್ರಿ ನಿಧನದ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿತ್ತು. ಹೀಗಾಗಿ ಇದೀಗ ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿ ಭೇಟಿ ಆಗಲಿದ್ದೇವೆ ಎಂದರು.
Related Articles
Advertisement
ಶಾಸಕಾಂಗ ಸಭೆಯಲ್ಲಿ ಶಾಸಕರು ಎತ್ತಿದ ಸಮಸ್ಯೆ ಬಗ್ಗೆ ಪರಿಹಾರ ಕಂಡುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಭೆಯಲ್ಲಿ ನಡೆಯುವ ಮುಕ್ತ ಚರ್ಚೆಯನ್ನು ಅಸಮಾಧಾನ ಎನ್ನಲಾಗದು. ಆಂತರಿಕ ಚರ್ಚೆಯನ್ನು ಭಿನ್ಯಮತ ಎಂದೂ ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಹೇಳಿದರು.
136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ಯಾರಾದಾರೂ ಏಕೆ ಸರ್ಕಾರ ಪತನಕ್ಕೆ ಯತ್ನಿಸುತ್ತಾರೆ. ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ಹೇಳಿದ್ದು, ಸರ್ಕಾರ ಪತನ ಎಂಬುದು ಕೇವಲ ಊಹಾಪೋಹ ಮಾತ್ರ ಎಂದರು.