Advertisement

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

12:08 PM May 07, 2024 | Team Udayavani |

ವಿಜಯಪುರ: ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎನ್ನುವವರಿಗೆ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ನನ್ನು ಹಿಡಿ ತರಲಾಗುತ್ತಿಲ್ಲ ಏಕೆ. ಲೈಂಗಿಕ ದೌರ್ಜನ್ಯ ಕೃತ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅಪಮಾನ ತಂದಿದೆ. ಇಷ್ಟಾದರೂ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎನ್ನುವ ಬಿಜೆಪಿ, ಜೆಡಿಎಸ್ ನಾಯಕರ ಹೇಳಿಕೆ ಮೂರ್ಖತನದ ಪರಮಾವಧಿ ಎಂದು ಸಕ್ಕರೆ, ಜವಳಿ ಸಚಿವ ಶಿವಾನಂದ ಪಾಟೀಲ ಹರಿಹಾಯ್ದರು.

Advertisement

ನಗರದ ಹೊಸ ವಿಠ್ಠಲ ಮಂದಿರ ಬಳಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ 117 ಸಂಖ್ಯೆಯ ಮತಗಟ್ಟೆ ತೆರಳಿ ಮತದಾನ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ, ದೇಶದ ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗಲು ಅವಕಾಶ ನೀಡಿದ್ದೇಕೆ ಎಂದು ಪ್ರಶ್ನಿಸಿದರು.

ಹಿಂದೆ ಗಾಲ್ಫ್ ಆಟಗಾರನೊಬ್ಬ ನಡೆಸಿದ್ದ‌ 42ಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಕೃತ್ಯವನ್ನೂ ಮೀರಿಸಿರುವ ಹಾಸನ‌ ಸಂಸದ ಪ್ರಜ್ವಲ್ ಕೃತ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ನೈತಿಕ ಅಧಪತನದ ಅವಮಾನ ತಂದಿದೆ. ಕೇಂದ್ರ ಸರ್ಕಾರಕ್ಕೆ ನಿಜಕ್ಕೂ ಈ ಹೀನ ಕೃತ್ಯದ ಬಗ್ಗೆ ಕಾಳಜಿ ಇದ್ದರೆ 24 ಗಂಟೆಯಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುವ ಇಚ್ಛಾಶಕ್ತಿ ತೋರುತ್ತಿತ್ತು ಎಂದರು.

ಇದನ್ನೂ ಓದಿ: Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

ಹುಬ್ಬಳ್ಳಿ ಪ್ರಕರಣದ ಪೊಲೀಸ್ ಹಾಗೂ ಕಾನೂನು ತನ್ನ ಕೆಲಸ ಮಾಡುತ್ತಿದ್ದರೂ ಪ್ರತಿಭಟನೆ ಮಾಡಿ ನೈತಿಕತೆ ಪ್ರಶ್ನೆ ಎತ್ತಿದ್ದ ಬಿಜೆಪಿ, ಜೆಡಿಎಸ್ ನಾಯಕರಿಗೆ ಪ್ರಜ್ವಲ್ ಹೀನ ಕೃತ್ಯ ಚುನಾವಣೆ ಮೇಲೆ ಪರಿಣಮ ಬೀರುವುದಿಲ್ಲ ಎನ್ನುವುದು ಮೂರ್ಖತನ. ಕೃತ್ಯವನ್ನು ಖಂಡಿಸುವಷ್ಟೂ ಸೌಜನ್ಯ ತೋರದ ಬಿಜೆಪಿ, ಜೆಡಿಎಸ್ ನಾಯಕರ ಯಾವ ನೈತಿಕತೆ ಎಂದು ವಾಗ್ದಾಳಿ ನಡೆಸಿದರು.

Advertisement

ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಯಾರೇ ಕಾರ್ಯದಲ್ಲಿ ಇದ್ದರೆ ಕಾನೂನು ತನ್ನ ಕೆಲಸ ಮಾಡುತ್ತಿದೆ. ಆದರೂ ನೈತಿಕತೆ ಪ್ರಶ್ನೆ ಎತ್ತಿದ್ದ ವಿಪಕ್ಷಗಳ ನಾಯಕರಿಗೆ ಪ್ರಜ್ವಲ್ ಪ್ರಕರಣದಲ್ಲಿ ಕನಿಷ್ಟ ಖಂಡಿಸುವಷ್ಟು  ನೈತಿಕತೆ ತೋರುತ್ತಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಜ್ವಲ್ ಪ್ರಕರಣ ಖಂಡಿತಾ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಟ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಉತ್ತರ ಕರ್ನಾಟಕ ಭಾಗದ 14 ಸ್ಥಾನಗಳಲ್ಲಿ 12 ಸ್ಥಾನ ಗೆಲ್ಲಲಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next