Advertisement

ಎಲ್ಲೆಂದರಲ್ಲಿ ಕಸ ಸುರಿದರೆ ದಂಡ, ಜೈಲು

04:25 PM Feb 08, 2021 | Team Udayavani |

ಮೈಸೂರು: ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವತ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

Advertisement

ನಗರದಲ್ಲಿ ಭಾನುವಾರ ನಗರದ ಸುತ್ತಿನ ರಿಂಗ್‌ ರಸ್ತೆಯ ಸ್ವತ್ಛತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ, ಪಾಲಿಕೆ, ಲೋಕೋಪಯೋಗಿ, ಜಲ ಮಂಡಳಿ, ರಾಷ್ಟ್ರೀಯ ಮತ್ತು  ರಾಜ್ಯ ಹೆದ್ದಾರಿ ಪ್ರಾಧಿಕಾರ ಇನ್ನಿತರ ಇಲಾಖೆಗಳಿಗೆ ರಿಂಗ್‌ ರಸ್ತೆಯಲ್ಲಿನ ಪ್ಲಾಸ್ಟಿಕ್‌ ತ್ಯಾಜ್ಯ ಹಾಗೂ  ಡೆಬ್ರಿಸ್‌ ತೆರವು ಸೇರಿದಂತೆ ಸ್ವತ್ಛತೆ ಮಾಡುವ ಜವಾಬ್ದಾರಿ ವಹಿಸಲಾಗಿದೆ ಎಂದರು.

ಸಾರ್ವಜನಿಕರು ರಸ್ತೆ ಬದಿ, ಎಲ್ಲೆಂದರಲ್ಲಿ ಕಸ ಸುರಿಯುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ  ಬೆಂಗಳೂರು ಮಾದರಿಯಲ್ಲಿ ಕ್ರಮ ಕೈ ಗೊಳ್ಳುವಂತೆ ಹೇಳಲಾಗಿದೆ. ಅಕ್ರಮವಾಗಿ ಡೆಬ್ರಿಸ್‌ ಮತ್ತು ಕಸ  ಸುರಿದರೆ ಲಾರಿ, ಟ್ರ್ಯಾಕ್ಟರ್‌ ಸೇರಿದಂತೆ ಇತರೆ ವಾಹನಗಳ ಮಾಲೀಕರಿಗೆ ದಂಡ ಹಾಕಿ ಜೈಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್‌ ಆಯುಕ್ತರಿಗೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಸ ವಿಲೇವಾರಿಗೆ ಜಾಗ ಗುರುತಿಸಿ: ಕಸ ವಿಲೇವಾರಿಗೆ ಜಾಗ ನೋಡಲು ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ. ಈಗಾಗಲೇ ಕೆಲವು ಜಾಗಗಳನ್ನು ನಾವು ಗುರುತಿಸಿದ್ದೇವೆ. ಈ ಸಂಬಂಧ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳುತ್ತೇವೆ. ಈಗ ಹೊರವರ್ತುಲ ರಸ್ತೆಯ ಎಲ್ಲ ಕಡೆ ವೀಕ್ಷಣೆ ಮಾಡಲಾಗಿದೆ. ಎಲ್ಲಇಲಾಖೆಯವರು ಅವರವರಿಗೆ ವಹಿಸಲಾದ ಜವಾಬ್ದಾರಿಯನ್ನು ನಿರ್ವಹಣೆ ಮಾಡಲಿದ್ದಾರೆ. ಈಗಾಗಲೇ ನಿರ್ಮಿತಿ ಕೇಂದ್ರದವರು ಸ್ವತ್ಛತೆ ಕೈಗೊಂಡಿ¨ದ್ದಾರೆ. ಉಳಿದ ಇಲಾಖೆಯವರು ಸಹ  ಸ್ವತ್ಛತೆಯನ್ನು ತ್ವರಿತವಾಗಿ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಮೈಸೂರಿನಲ್ಲಿ ಕಸ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಹೀಗಾಗಿ ರಸ್ತೆಗಳ ಹಾಗೂ ಸುತ್ತಮುತ್ತಲ ಸ್ವತ್ಛತೆ ಬಹಳ ಮುಖ್ಯವಾಗಿದೆ. ರಸ್ತೆಯಲ್ಲಿ ಎಲ್ಲೆಂದರಲ್ಲಿ ಡಬ್ರಿಸ್‌ ಸುರಿಯುವುದಕ್ಕೂ ಕಡಿವಾಣ ಬೀಳಬೇಕಿದೆ. ಈ ತ್ಯಾಜ್ಯಗಳನ್ನು ಸುರಿಯಲು ಸರ್ಕಾರಿ ಜಾಗವನ್ನು ಗುರುತಿಸಲಾಗುತ್ತದೆ ಎಂದರು.

Advertisement

ಇದನ್ನೂ ಓದಿ:ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಪಾದಯಾತ್ರೆ

ನಗರ ಹಸಿರಾಗಿ ಕಾಣಲಿ: ಮೈಸೂರಿನಲ್ಲಿ ಹಸಿರೀಕರಣಕ್ಕೆ ಒತ್ತು ಕೊಡಬೇಕು. ರಸ್ತೆ ಪಕ್ಕದಲ್ಲಿ ಒಣಗಿರುವ ಹಾಗೂ ಗಿಡವಿಲ್ಲದ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರೀಕರಣ ಮಾಡಬೇಕು. ತಕ್ಷಣವೇ 42

ಕಿ.ಮೀ.ನ ರಿಂಗ್‌ ರಸ್ತೆ ವ್ಯಾಪ್ತಿಯಲ್ಲಿ ಒಣ ಸಸಿಗಳನ್ನು ತೆಗದು ಬೇರೆ ಸಸಿಗಳನ್ನು ನೆಡಬೇಕು ಎಂದು ಅರಣ್ಯ ಇಲಾಖೆ, ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌, ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಡಿಸಿಪಿ ಪ್ರಕಾಶ್‌ ಗೌಡ, ಮುಡಾ ಆಯುಕ್ತ ನಟೇಶ್‌ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next