ಪಣಜಿ: ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ರವರ ಆರೋಗ್ಯ ಸುಧಾರಿಸುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಸ್ಥಳಾಂತರಿಸುವ ಅಗತ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಬಾಂಬೋಲಿಂ ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯಕ್ ರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಂತದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗೋವಾ ಬಾಂಬೋಲಿಂ ಆಸ್ಪತ್ರೆಯ ವೈದ್ಯರು ಸಚಿವ ಶ್ರೀಪಾದ ನಾಯಕ್ ರವರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಏಮ್ಸ್ ಆಸ್ಪತ್ರೆಯ ವೈದ್ಯರು ಸಮಾಧಾನ ವ್ಯಕ್ತಪಡಿಸಿದ್ದಾರೆ. ಏಮ್ಸ್ ವೈದ್ಯರ ತಂಡ ಬುಧವಾರ ಬಾಂಬೋಲಿಂ ಆಸ್ಪತ್ರೆಗೆ ಆಗಮಿಸಿ ಶ್ರೀಪಾದ ನಾಯಕ್ರಿಗೆ ನೀಡುತ್ತಿರುವ ಚಿಕಿತ್ಸೆಗೆ ಸಂಬಂಧಿಸಿದಂತೆ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಶ್ರೀಪಾದ ನಾಯಕ್ ರವರಿಗೆ ಪ್ರಜ್ಞೆ ಬಂದಿದ್ದು ಮಾತನಾಡುತ್ತಿದ್ದಾರೆ. ಬುಧವಾರ ಬೆಳಿಗ್ಗೆ ಅವರು ನನ್ನೊಂದಿಗೆ ಮಾತನಾಡಿದರು. ಬಾಂಬೋಲಿಂ ಆಸ್ಪತ್ರೆಯಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಹಣ ವರ್ಗಾವಣೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಟಿಎಂಸಿ ಮಾಜಿ ಸಂಸದ ಸಿಂಗ್ ಬಂಧನ
ಎಮ್ಸ್ ತಂಡದ ಭೇಟಿ: ಸಚಿವ ಶ್ರೀಪಾದ ನಾಯಕ್ ರವರಿಗೆ ಚಿಕಿತ್ಸೆ ನೀಡಲಾಗುತ್ತಿರುವ ಬಾಂಬೋಲಿಂ ಆಸ್ಪತ್ರೆಗೆ ಆಗಮಿಸಿದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರ ತಂಡ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಶ್ರೀಪಾದ ನಾಯಕ್ ರವರ ಉಸಿರಾಟ, ರಕ್ತದೊತ್ತಡ, ಮತ್ತು ಇತರ ಆರೋಗ್ಯ ವಿಷಯದಲ್ಲಿ ನಮಗೆ ತೃಪ್ತಿಯಿದೆ. ಗುರುವಾರ ಕೇಂದ್ರ ಸಚಿವ ಶ್ರೀಪಾದ ನಾಯಕ್ ರವರನ್ನು ವೆಂಟಿಲೇಟರ್ ನಿಂದ ವಾರ್ಡ್ ಗೆ ಶಿಫ್ಟ್ ಮಾಡಲು ಸೂಚನೆ ನೀಡಿದ್ದೇವೆ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರು ಮಹಿತಿ ನೀಡಿದ್ದಾರೆ.