ಬಳ್ಳಾರಿ: ಕಾಂಗ್ರೆಸ್ ಪಕ್ಷದ ಡಿಎನ್ ಎಯಲ್ಲೇ ಭ್ರಷ್ಟಚಾರ ಅಡಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬಗ್ಗೆ ಆರೋಪಿಸುತ್ತಿರುವ ಕಾಂಗ್ರೆಸ್ ನವರು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದರು.
ನಗರದ ವಿಮ್ಸ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇದನ್ನೂ ಓದಿ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಕ್ಕೆ ರಾಯಭಾರಿ ಇದ್ದಂತೆ. ದೆಹಲಿಯಿಂದ ಕರ್ನಾಟಕದ ವರೆಗೆ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1. ಕಾಂಗ್ರೆಸ್ ಡಿಎನ್ಎದಲ್ಲೇ ಭ್ರಷ್ಟಾಚಾರ ಇದೆ. ಕಾಂಗ್ರೆಸ್ ನಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಇಲ್ಲ ಎಂದು ಗಂಭೀರವಾಗಿ ಆರೋಪಿಸಿದ ಸಚಿವ ರಾಮುಲು, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಆರೋಪಿಸುತ್ತಿರುವ ಕಾಂಗ್ರೆಸ್ ನವರ ಬಾಯಲ್ಲಿ ಭೂತದ ಬಾಯಲ್ಲಿ ಭಗದ್ಗೀತೆ ಬಂದಂತಾಗಿದೆ ಎಂದು ವ್ಯಂಗ್ಯವಾಡಿದರು.
Related Articles
ನೈತಿಕವಾಗಿ ದಿವಾಳಿಯಾಗಿರುವ ಕಾಂಗ್ರೆಸ್ ನವರು ಬಿಜೆಪಿಯವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.