ಚಿತ್ರದುರ್ಗ: 75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಧ್ವಜಾರೋಹಣ ನಡೆಸಿದರು.
ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ದೇಶದ ರಕ್ಷಣಾ ವಿಚಾರದಲ್ಲಿ ಭಾರತ ವಿಶ್ವದಲ್ಲೇ ಪ್ರಬಲವಾಗಿ ಮುನ್ನುಗ್ಗುತ್ತಿದೆ. ನರೇಂದ್ರ ಮೋದಿ ಅವರ ದೂರದೃಷ್ಠಿ, ಇಚ್ಚಾಶಕ್ತಿಯಿಂದ ಭಾರತದ ರಕ್ಷಣಾ ವ್ಯವಸ್ಥೆ ಆಧುನಿಕ ತಂತ್ರಜ್ಞಾನಗಳ ಮೂಲಕ ಪ್ರಬಲವಾಗಿದೆ ಎಂದರು.
ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಮಾಡಿರುವ ಮೂಲಕ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಕಲಚೇತನರು, ಸಂಧ್ಯಾ ಸುರಕ್ಷಾ ಯೋಜನೆ ಪಿಂಚಣಿ ಹೆಚ್ಚಳ ಮಾಡಲಾಗಿದೆ ಎಂದರು.
ಇದನ್ನೂ ಓದಿ:ರಾಷ್ಟ್ರ ಗೀತೆ ಅಭಿಯಾನಕ್ಕೆ ದನಿಗೂಡಿಸಿದ 1.5 ಕೋಟಿ ಜನ
ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಸಚಿವನಾಗಿ ಕೋವಿಡ್ ನಿಯಂತ್ರಣದಲ್ಲಿ ಭಾಗಿಯಾಗಿ ಕೆಲಸ ನಿರ್ವಹಿಸಿದ್ದು ಅತ್ಯಂತ ಸವಾಲಿನ ಕೆಲಸ ಆಗಿತ್ತು. ಈ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ ಎಲ್ಲಾ ವಾರಿಯರ್ಸ್‌ಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕೋವಿಡ್ ಸಂದರ್ಭವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿರ್ವಹಿಸಿದೆ ಎಂದು ತಿಳಿಸಲು ಹೆಮ್ಮೆ ಅನ್ನಿಸುತ್ತದೆ ಎಂದರು.
ಒಲಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. ಒಟ್ಟು ಏಳು ಪದಕ ಪಡೆದಿರುವುದು ನವ ಭಾರತದ ಕ್ರೀಡಾ ಸ್ಪೂರ್ತಿಗೆ ಪ್ರೇರಣೆಯಾಗಿದೆ ಎಂದು ಶ್ರೀರಾಮುಲು ಅಭಿಪ್ರಾಯ ಪಟ್ಟರು.