Advertisement

ಈ ಪರಿಸ್ಥಿತಿಯಲ್ಲಿ ರಾಜಕೀಯ ಮಾಡಿದರೆ ಮಾನವೀಯ ಮೌಲ್ಯ ಕಳೆದುಕೊಳ್ಳಬೇಕಾಗುತ್ತದೆ: ಶ್ರೀರಾಮುಲು

04:15 PM Apr 29, 2021 | Team Udayavani |

ಚಿತ್ರದುರ್ಗ: ರಾಜ್ಯದ ಜನ ಸಂಕಷ್ಟದಲ್ಲಿದ್ದು ಎಂದೂ ಕಂಡರಿಯದ ಸ್ಥಿತಿಯಿದೆ. ಜನರ ಜೀವದ ಜತೆಗೆ ಜೀವನವನ್ನೂ ಉಳಿಸಬೇಕಾಗಿದೆ. ಮುಖ್ಯಮಂತ್ರಿಗಳು  ಮತ್ತು ನಮ್ಮ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವೇಳೆ ರಾಜಕೀಯ ಮಾಡಿದರೆ ಮಾನವೀಯ ಮೌಲ್ಯ ಕಳೆದು ಕೊಳ್ಳಬೇಕಾಗುತ್ತದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಸೋಂಕು ಬಹುತೇಕ ನಿಯಂತ್ರಣದಲ್ಲಿದೆ. ಕೋವಿಡ್ ಚೈನ್ ಬ್ರೇಕ್ ಮಾಡುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು ಎಂದರು.

ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ : ಖ್ಯಾತ ನಟ ಸೇರಿ 34 ಜನರ ವಿರುದ್ಧ ಪ್ರಕರಣ

ಚಿತ್ರದುರ್ಗಕ್ಕೆ ಕಳೆದ ಒಂದು ತಿಂಗಳಿನಿಂದ ಬರಲಾಗಿಲ್ಲ. ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಕಾರಣ ಬರಲಾಗಿಲ್ಲ. ಜಿಲ್ಲಾ ಮಂತ್ರಿಯಾಗಿ ಜಿಲ್ಲಾಧಿಕಾರಿಗಳ ಜತೆ ನಿತ್ಯ ಸಂಪರ್ಕದಲ್ಲಿದ್ದು ಸಲಹೆ, ಸೂಚನೆ ನೀಡಿದ್ದೇನ ಎಂದು ಶ್ರೀರಾಮುಲು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next