Advertisement

ದಸರಾ ಯೋಗಾಸನ ಸ್ಪರ್ಧೆ ಉದ್ಘಾಟಿಸಿದ ಸಚಿವ ಎಸ್.ಟಿ.ಸೋಮಶೇಖರ್

10:45 AM Sep 29, 2022 | Team Udayavani |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

Advertisement

ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಯೋಗ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಸಚಿವರು, ಯೋಗ ಕಲಿಕೆಗೆ ಈಗ ಹೆಚ್ಚು ಒತ್ತು ನೀಡಲಾಗುತ್ತಿದೆ. ಯೋಗವನ್ನು ಮಾನಸಿಕ ಮತ್ತು ದೈಹಿಕ ವಿಕಸನದ ಸಾಧನವಾಗಿ ಗುರುತಿಸಲಾಗಿದೆ ಎಂದರು.

ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಮತ್ತು ದೇಹ ಎರಡನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಯೋಗದಿನಂದು ಮೈಸೂರಿಗೆ ಆಗಮಿಸುವ ಮೂಲಕ ಸಾಂಸ್ಕೃತಿಕ ನಗರಿಯ ಕೀರ್ತಿ ಮತ್ತಷ್ಟು ಹೆಚ್ಚಾಯಿತು ಎಂದರು.

ಇದನ್ನೂ ಓದಿ:8 ಕಾರುಗಳಲ್ಲಿ ಹುಟ್ಟುಹಬ್ಬ ಆಚರಿಸಲು ಹೋಗಿ ಪೊಲೀಸರ ಅತಿಥಿಯಾದ 21 ಯುವಕರು: ಇಲ್ಲಿದೆ ಕಾರಣ

ಸಂಸದ ಪ್ರತಾಪ್ ಸಿಂಹ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೇ ಶ್ರೀನಿವಾಸ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷ ಅಪ್ಪಣ್ಣ, ದಸರಾ ಸಾಹಸ ಕ್ರೀಡಾ ಉಪಾಧ್ಯಕ್ಷ ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next