Advertisement

ಬಿಎಸ್‌ವೈ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸೋಮಶೇಖರ್‌

07:56 PM Jul 24, 2022 | Team Udayavani |

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2023ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ,  ಆದರೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ  ಹೇಳಿದ್ದಾರೆ ಎಂದರು.

ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದು, ಅದಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ ಎಂದು ಹೇಳಿದರು.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರ ಕೋರ್‌ ಕಮಿಟಿಗೆ ಬಿಟ್ಟದ್ದು. ನಮ್ಮಲ್ಲಿ ಕೋರ್‌ ಕಮಿಟಿ ಪರಮೋಚ್ಚವಾಗಿದ್ದು, ಅದರ ನಿರ್ಧಾರವೇ ಅಂತಿಮ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next