Advertisement

ಮಕ್ಕಳೊಂದಿಗೆ ಮೋಜು: ಸಚಿವ ಸುಧಾಕರ್‌ ರಾಜೀನಾಮೆಗೆ ಆಗ್ರಹ

11:37 PM Apr 13, 2020 | Sriram |

ಬೆಂಗಳೂರು: ಇಡೀ ವಿಶ್ವವೇ ಕೋವಿಡ್ 19 ವೈರಸ್‌ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಮಕ್ಕಳೊಂದಿಗೆ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮೋಜು ಮಾಡಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದ್ದು, ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಚಿವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ಅವರಿಗೆ ಕೊರೊನಾ ಜವಾಬ್ದಾರಿ ಯನ್ನು ಸರಕಾರ ನೀಡಿದೆ. ಜವಾಬ್ದಾರಿ
ಯುತ ಸ್ಥಾನದಲ್ಲಿರುವವರು, ಸ್ವತಃ ವೈದ್ಯರಾಗಿ, ಪ್ರಜ್ಞಾವಂತ ಎನಿಸಿಕೊಂಡಿರುವವರು ಈ ಹೊತ್ತಲ್ಲಿ ಜನರಿಗೆ ತಮ್ಮ ವೈಯಕ್ತಿಕ ಜೀವನದ ಮೋಜಿನ ಚಿತ್ರವನ್ನು ಹಾಕಿಕೊಂಡಿರುವುದು ಆಘಾತ ತಂದಿದೆ ಎಂದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next