Advertisement

ಕಾಂಗ್ರೆಸ್ ಜತೆ ಸೇರಿರುವ ‘ಹಿತಶತ್ರುಗಳು’: ಸಚಿವ ಸುಧಾಕರ್ ಪ್ರಸ್ತಾಪ ಮಾಡಿದ್ದು ಯಾರ ಬಗ್ಗೆ?

12:26 PM Apr 18, 2022 | Team Udayavani |

ಬೆಂಗಳೂರು: ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್   ನಾಯಕರ ಜತೆ ಕೆಲ ‘ಹಿತಶತ್ರುಗಳು’ ಕೈಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿರುವ ಸಾಮಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

Advertisement

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಬರೆದುಕೊಂಡಿರುವ ಅವರು, ” ಹಿತಶತ್ರುಗಳ ಷಡ್ಯಂತ್ರ” ಎಂಬ ಪದವನ್ನು ಯಾರನ್ನು ಉದ್ದೇಶಿಸಿ ಪ್ರಯೋಗ ಮಾಡಿದ್ದಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

ಇತ್ತೀಚೆಗೆ ಸುಳ್ಳುಗಳ ಕಂತೆಯನ್ನು ಸತ್ಯ ಎಂದು‌ ಬಿಂಬಿಸುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ಆಧಾರ ರಹಿತ ದಾಖಲೆಗಳು ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ

ಹಗರಣದ ಭೂತವನ್ನೇ ಬೆನ್ನಿಗೆಕಟ್ಟಿಕೊಂಡಿರುವ ಕಾಂಗ್ರೆಸಿಗರ ಬಯಲಾಟವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಆತ್ಮಾವಲೋಕನ‌ ಮಾಡಿಕೊಂಡು ಇನ್ನಾದರೂ ರಚನಾತ್ಮಕ ಕೆಲಸದ ಮೂಲಕ ಜನತೆಯ ಮುಂದೆ ಹೋಗಿ ಎಂದು ಕಾಂಗ್ರೆಸ್ ಗೆ ಕಿವಿ ಮಾತು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next