Advertisement

ಎಲ್ಲಾ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸುತ್ತೇವೆ:ಸಚಿವ ವಿ.ಸುನೀಲ್ ಕುಮಾರ್

11:45 AM Nov 01, 2021 | Team Udayavani |

ಉಡುಪಿ: ಪ್ರಸ್ತುತ ಅಗತ್ಯತೆಯಂತೆ ಸರೋಜಿನಿ ಮಹಿಷಿ ವರದಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ರಾಜ್ಯದಲ್ಲಿರುವ ಎಲ್ಲಾ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ರಾಜ್ಯ ಸರಕಾರ ಚಿಂತಿಸಿದೆ. ಇದಕ್ಕಾಗಿ ಕಾನೂನಿನ ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

Advertisement

ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ನೀಡಿದ ಸಂದೇಶದಲ್ಲಿ ಮಾತನಾಡಿದರು.

ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಏಕರೂಪತೆ ನೀಡಲು ಸುತ್ತೋಲೆ ಹೊಡಿಸಲಾಗುವುದು. ಪ್ರಶಸ್ತಿಗೆ ಆಯ್ಕೆಗೂ ಏಕರೂಪ ನೀಡಿ ನಿಯಮಗಳನ್ನು ರೂಪಿಸಲಾಗುವುದು ಎಂದರು.

Advertisement

ಈ ಬಾರಿಯ ರಾಜ್ಯ ಪ್ರಶಸ್ತಿಗಳಿಗೆ ಅರ್ಹರನ್ನು ಹುಡುಕಿಕೊಂಡು ಹೋಗಿ ನೀಡಲಾಗಿದೆ.ಈ ಮೂಲಕ ಈವರೆಗೆ ಅನುಸರಿಸುತಿದ್ದ ಕ್ರಮ ಬಿಟ್ಟು ತೆರೆಮರೆ ಪ್ರತಿಭೆಗಳನ್ನು ಗುರುತಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next